ಉಡುಪಿ : ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಪೂರ್ವಭಾವಿ ಸಭೆ ದಿನಾಂಕ 08-10-2024 ರಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಮಾತನಾಡಿ ಭಾರತೀಯ ಜನತಾ ಪಾರ್ಟಿ ಕಿಶೋರ್ ಕುಮಾರ್ ಬೊಟ್ಯಾಡಿ ಅvರನ್ನು ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ ಇವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ನಾವೆಲ್ಲರೂ ಶ್ರಮಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ್ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರಿತಾ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್ ಜಿಲ್ಲಾ ಬಿಜೆಪಿ ನಿಕಟಪೂರ್ವ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಮತ್ತು ಬಿಜೆಪಿ ಜಿಲ್ಲಾ, ಕಾಪು ಮಂಡಲ ಪದಾಧಿಕಾರಿಗಳು ಪಕ್ಷದ ಪ್ರಮುಖರು, ಮುಖಂಡರು, ಹಿರಿಯರು, ಕಾರ್ಯಕರ್ತರು ಉಪಸ್ಥಿತರಿದ್ದರು.