Home » ಕುಂದಗನ್ನಡ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
 

ಕುಂದಗನ್ನಡ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

by Kundapur Xpress
Spread the love

ಕುಂದಾಪುರ : ಕುಂದಗನ್ನಡ ಸಮೃದ್ಧವಾದ ಭಾಷೆ. ಈ ಭಾಷೆಯೊಂದಿಗೆ ಬೆಸೆದುಕೊಂಡ ಸಂಸ್ಕೃತಿ ಉಳಿಯುವಂತಾಗಬೇಕಾದರೆ ಶಾಲಾ-ಕಾಲೇಜುಗಳ ಪಠ್ಯಕ್ರಮದಲ್ಲಿಯೂ ಈ ಭಾಷೆಯನ್ನು ಅಳವಡಿಸುವಂತಾಗಬೇಕು ಮತ್ತು ಭಾಷೆಯನ್ನು ಬಳಸಿದಾಗ ಮಾತ್ರ ಅದು ಉಳಿಯಲು ಸಾಧ್ಯ ಎಂದು ಕುಂದಾಪುರದ ಹಿರಿಯ ನ್ಯಾಯವಾದಿಗಳು ಹಾಗೂ ಸಾಂಸ್ಕೃತಿಕ ಚಿಂತಕರಾದ ಶ್ರೀ ಎ.ಎಸ್.ಎನ್. ಹೆಬ್ಬಾರ್ ಹೇಳಿದರು.

ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕುಂದಗನ್ನಡ ಸಂಘದ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕುಂದಗನ್ನಡ ಭಾಷೆಯ ಅನನ್ಯತೆ ಮತ್ತು ಇಲ್ಲಿನ ಸಂಸ್ಕೃತಿಯ ಅಸ್ಮಿತೆಯನ್ನು ಉಳಿಸುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯ ಎಂದರು.

ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು.ಕುಂದಗನ್ನಡ ಸಂಘದ ಸಂಯೋಜಕರಾದ ಶ್ರೀಮತಿ ರೇಷ್ಮಾ ಶೆಟ್ಟಿ ಮತ್ತು ಶ್ರೀಮತಿ ಪ್ರವೀಣಾ ಮಹಾಬಲ ಪೂಜಾರಿ ಉಪಸ್ಥಿತರಿದ್ದರು.ವಿದ್ಯಾರ್ಥಿಗಳಾದ ಅಶ್ಮಿತಾ ಸ್ವಾಗತಿಸಿ, ವಿಸ್ಮಿತಾ ಅತಿಥಿಗಳನ್ನು ಪರಿಚಯಿಸಿ, ಗಗನ್ ವಂದಿಸಿ, ಸ್ವಾತಿ ಕಾರ್ಯಕ್ರಮ ನಿರೂಪಿಸಿದರು.

   

Related Articles

error: Content is protected !!