ಮುಂಬೈ : ಬುಧವಾರ ನಿಧನರಾದ ಟಾಟಾ ಸಮೂಹ ಸಾಮ್ರಾಜ್ಯದ ವಿಶ್ರಾಂತ ಮುಖ್ಯಸ್ಥ ಹಾಗೂ ಶ್ರೇಷ್ಠ ಸಮಾಜಸೇವಕ ರತನ್ ಟಾಟಾ ಅವರ ಅಂತ್ಯಕ್ರಿಯೆ ಸಹಸ್ರಾರು ಶೋಕತಪ್ತ ಗಣ್ಯರು ಹಾಗೂ ಅಭಿಮಾನಿಗಳ ನಡುವೆ ಮುಂಬೈನ ವರ್ಲಿಯಲ್ಲಿರುವ ಪಾರ್ಸಿ ಚಿತಾಗಾರದಲ್ಲಿ ನೆರವೇರಿತು.
ಇದರಿಂದ ಭಾರತದಲ್ಲಿ ದಶಕಗಳ ಕಾಲ ಉದ್ಯಮರಂಗದಲ್ಲಿ ಛಾಪು ಮೂಡಿಸಿದ್ದ ಉದ್ಯಮ ಕ್ಷೇತ್ರದ ಮಾಣಿಕ್ಯವೊಂದು ಮರೆಯಾಯಿತು ಅಂತ್ಯ ಕ್ರಿಯೆಯು ಸರ್ಕಾರಿ ಗೌರವಗಳೊಂದಿಗೆ ಹಾಗೂ ಪಾರ್ಸಿ ಸಮುದಾಯದವರು ಅನುಸರಿಸುವ ವಿಧಿವಿಧಾನಗಳ ಪ್ರಕಾರ ನೆರವೇರಿತು. ಅವರನ್ನು ವಿದ್ಯುತ್ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ಮಾಡಲಾಯಿತು. ಮುಂಬೈ ಪೊಲೀಸರು ಟಾಟಾ ಅವರಿಗೆ ಗನ್ ಸೆಲ್ಯೂಟ್ ಮೂಲಕ ಗೌರವ ಸಲ್ಲಿಸಿದರು