ಉಡುಪಿ :ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಾವರ ತಾಲ್ಲೂಕು ಆಡಳಿತ ಸೌಧದ ನೂತನ ಕಟ್ಟಡವನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಯವರೊಂದಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಗುರುವಾರ ಉದ್ಘಾಟಿಸಿದರು.
ಬ್ರಹ್ಮಾವರ ತಾಲ್ಲೂಕು ಆಡಳಿತ ಸೌಧದ ನೂತನ ಕಟ್ಟಡವು10 ಕೋಟಿ ರೂ. ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿತ್ತು ಈ ಸಂದರ್ಭದಲ್ಲಿ ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗವೇಣಿ, ಉಡುಪಿ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ., ಪೋಲಿಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ
ಸಹಾಯಕ ಆಯುಕ್ತರಾದ ರಶ್ಮಿ, ಬ್ರಹ್ಮಾವರ ತಹಶೀಲ್ದಾರರಾದ ರಾಜಶೇಖರ್ ಮೂರ್ತಿ, ಕರ್ನಾಟಕ ಗೃಹ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸಹನಾ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು