ಕುಂದಾಪುರ : ನಾಳೆ ವಿಜಯದಶಮಿಯಂದು ನಡೆಯುವ ಶಾರದ ಮಹೋತ್ಸವದ ಮೆರವಣಿಗೆಯ ಹಿನ್ನಲೆಯಲ್ಲಿ ಕುಂದಾಪುರದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಕುಂದಾಪುರ ನಗರ ಠಾಣಾ ವ್ಯಾಪ್ತಿಯ ಕುಂದಾಪುರ ನಗರ ವಡೇರಹೋಬಳಿ ಹಂಗಳೂರು ಮತ್ತು ಕೋಟೇಶ್ವರ ಗ್ರಾಮಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ
ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಿರೂರು ಯಡ್ತರೆ ಬೈಂದೂರು ಮತ್ತು ಬಿಜೂರು ಗ್ರಾಮಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ