Home » ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲು
 

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲು

ಬೆದರಿಕೆ ಆರೋಪ : ದೂರು ದಾಖಲಿಸಿದ ಎಡಿಜಿಪಿ ಚಂದ್ರಶೇಖ‌ರ್

by Kundapur Xpress
Spread the love

ಬೆಂಗಳೂರು : ತನ್ನ ಹಾಗೂ ತನ್ನ ಕುಟುಂಬದ ವಿರುದ್ಧ ದುರುದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಸುರೇಶ್ ಬಾಬು ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ದೂರು ದಾಖಲಿಸಿದ್ದಾರೆ.

ಈ ಸಂಬಂಧ ಸಂಜಯ ನಗರ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಿಸಿರುವ ಅವರು, ತಾನು ಕುಮಾರಸ್ವಾಮಿ ವಿರುದ್ಧ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 16/2014 ಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಸಾಕ್ಷಾಧಾರಗಳು ಲಭ್ಯವಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ರಾಜ್ಯಪಾಲರ ಅನುಮತಿ ಕೋರಿರುತ್ತೇನೆ ಎಂದು ತಿಳಿಸಿದ್ದಾರೆ.

ಸಂಡೂರು ಗಣಿ ಹಗರಣದಲ್ಲಿ ಲೋಕಾಯುಕ್ತದೆದುರು ಹಾಜರಾಗಿ ವಿಚಾರಣೆ ಎದುರಿಸಿದ ಬೆನ್ನಿಗೇ ಕುಮಾರಸ್ವಾಮಿ ಅವರು ಪತ್ರಿಕಾಗೋಷ್ಠಿ ಮಾಡಿ ಲೋಕಾಯುಕ್ತ ಎಸ್ ಐ ಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು. ಅವರು ಭ್ರಷ್ಟ, ಬ್ಲ್ಯಾಕ್ ಮೇಲರ್ ಇತ್ಯಾದಿ ಆರೋಪ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಚಂದ್ರಶೇಖರ್ ನಾವು ಇದರಿಂದ ವಿಚಲಿತರಾಗುವುದಿಲ್ಲ, ಆರೋಪಿ ಯಾವುದೇ ಸ್ಥಾನದಲ್ಲಿದ್ದರೂ ಆತ ಆರೋಪಿಯೇ ಎಂದು ಹೇಳಿದ್ದರು. ಅದಕ್ಕೆ ಮತ್ತೆ ತಿರುಗೇಟು ನೀಡಿದ್ದ ಕುಮಾರಸ್ವಾಮಿ ಆತ ಕ್ರಿಮಿನಲ್ ಎಂದೇ ಚಂದ್ರಶೇಖ‌ರ್ ವಿರುದ್ಧ ಹರಿಹಾಯ್ದಿದ್ದರು.

ಈಗ ಎಡಿಜಿಪಿ ಚಂದ್ರಶೇಖರ್ ಅವರು ಕುಮಾರಸ್ವಾಮಿ ವಿರುದ್ಧವೇ ಪೊಲೀಸ್ ದೂರು ದಾಖಲಿಸಿ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಕೇಂದ್ರ ಸಚಿವರ ವಿರುದ್ಧವೇ ಹಿರಿಯ ಪೊಲೀಸ್ | ಅಧಿಕಾರಿ ಕಾನೂನು ಸಮರಕ್ಕೆ ಮುಂದಾಗಿರುವ ಅಪರೂಪದ ಪ್ರಕರಣ ಇದಾಗಲಿದೆ.

   

Related Articles

error: Content is protected !!