ಮೈಸೂರು : ‘ನನ್ನ ಮೇಲೆ ಚಾಮುಂಡೇಶ್ವರಿಯ ಆಶೀರ್ವಾದ ಸದಾ ಇರುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಅವಕಾಶ ಮಾಡಿಕೊಟ್ಟಿದ್ದಾರೆ. ಇದರಿಂದ ಇಷ್ಟೊಂದು ಬಾರಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಲು ಅವಕಾಶ ಸಿಕ್ಕಿದೆ. ಚಾಮುಂಡೇಶ್ವರಿಯ ಆಶೀರ್ವಾದ ಸದಾ ಇರುತ್ತೆ ದೇವರ ಆಶೀರ್ವಾದ ಇಲ್ಲ ಎನ್ನುವುದಿಲ್ಲ ದೇವರ ಆಶೀರ್ವಾದ ಇರುವುದರಿಂದಲೇ ಇಷ್ಟು ವರ್ಷ ರಾಜಕೀಯದಲ್ಲಿ ಉಳಿದಿರುವುದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೊಗಳುವವರು, ತೆಗಳುವವರು ಇಬ್ಬರೂ ಇರುತ್ತಾರೆ. ಆದರೆ ಆರೋಗ್ಯಕರ ಚರ್ಚೆ ಆಗಬೇಕು ಎಂದರು.
ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಡ್ಯಾಂಗಳು ತುಂಬಿರುವುದರಿಂದ ಅದ್ದೂರಿಯಾಗಿ ದಸರಾ ಆಚರಿಸಲಾಗುತ್ತಿದೆ. ಉತ್ತಮ ಮಳೆ, ಬೆಳೆಯಾಗಿ, ರೈತರು, ಸಾರ್ವಜನಿಕರು ಸುಖ, ಸಮೃದ್ಧಿಯಿಂದ ಇರಲಿ ಎಂದು ದೇವಿಯಲ್ಲಿ ಪ್ರಾರ್ಥಿ ಸಿದ್ದೇನೆ. ದಸರಾ ಅಂದರೆ ದುಷ್ಟ ಶಕ್ತಿಗಳ ಸಂಹಾರ, ಶಿಷ್ಟ ಜನರ ರಕ್ಷಣೆ, ವಿಜಯನಗರದ ಅರಸರು ಜಯದ ಸಂಕೇತವಾಗಿ ದಸರಾ ಮಾಡಿದ್ದರು. ಮೈಸೂರು ಅರಸರು ಅದನ್ನು ಮುಂದುವರಿಸಿದರು. ಇವತ್ఎంತು ಅದೇ ಸಂಪ್ರದಾಯ ಮುಂದುವರಿದಿದೆ ಎಂದು ತಿಳಿಸಿದರು