ನವದೆಹಲಿ : ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ವಯನಾಡು ಕ್ಷೇತ್ರಕ್ಕೆ ಮಂಗಳವಾರ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಪಕ್ಷದ ಹಿರಿಯ ನಾಯಕಿಯ ಹೆಸರನ್ನು ಪಕ್ಷ ಪ್ರಕಟಿಸಿದೆ
ಕಳೆದ ಚುನಾವಣೆಯಲ್ಲಿ ರಾಹುಲ್ ಗಾಂಧಿ ತಾವು ಗೆದ್ದಿದ್ದ 2 ಕ್ಷೇತ್ರಗಳ ಪೈಕಿ ರಾಯ್ಬರೇಲಿ ಉಳಿಸಿಕೊಂಡು, ವಯನಾಡಿಗೆ ರಾಜೀನಾಮೆ ನೀಡಿದ್ದರು. ಅಲ್ಲಿಗೆ ಉಪ ಚುನಾವಣೆ ನಿಗದಿಯಾಗಿದ್ದು, ಅಲ್ಲಿಂದ ಇದೀಗ ಅವರ ಸೋದರಿಯನ್ನು ಕಣಕ್ಕೆ ಇಳಿಸಲು ಪಕ್ಷ ನಿರ್ಧರಿಸಿದೆ