Home » ಹೈಕೋರ್ಟಿಗೆ ದರ್ಶನ್‌ ಜಾಮೀನು ಅರ್ಜಿ
 

ಹೈಕೋರ್ಟಿಗೆ ದರ್ಶನ್‌ ಜಾಮೀನು ಅರ್ಜಿ

by Kundapur Xpress
Spread the love

ಬೆಂಗಳೂರು : ರೇಣುಕಾ ಸ್ವಾಮಿಯ ಕೊಲೆ ಪ್ರಕರಣದಲ್ಲಿ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ತಿರಸ್ಕರಿಸಿದ ಬೆನ್ನಲ್ಲೇ ಜಾಮೀನಿಗಾಗಿ ದರ್ಶನ್ ಹೈಕೋರ್ಟ್ ಮೊರೆ ಹೋಗಿದ್ದಾರೆ.ಜಾಮೀನು ಮಂಜೂರು ಮಾಡಬೇಕು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಕುರಿತ ಜಾಮೀನು ಅರ್ಜಿಯನ್ನು ದರ್ಶನ್ ಪರ ವಕೀಲ ಎಸ್. ಸುನಿಲ್ ಕುಮಾರ್‌ ಮಂಗಳವಾರ ಮಧ್ಯಾಹ್ನ 300 ಪುಟಗಳಿಗೂ ಅಧಿಕ ದಸ್ತಾವೇಜಿನ ಅರ್ಜಿಯನ್ನು ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ.

ಮೆರಿಟ್ ಆಧಾರದಲ್ಲಿ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿರುವ ದರ್ಶನ್, ತನ್ನ ಆರೋಗ್ಯ ಸಮಸ್ಯೆಗಳನ್ನು ಅರ್ಜಿಯಲ್ಲಿ ವಿವರಿಸಿದ್ದಾರೆ ತುರ್ತು ವೈದ್ಯಕೀಯ ಚಿಕಿತ್ಸೆಯ ಅಗತ್ಯವನ್ನೂ ಪ್ರತಿಪಾ ದಿಸಿದ್ದಾರೆ. 

   

Related Articles

error: Content is protected !!