ಮಂಡ್ಯ : ಮೇಕೆದಾಟು ಯೋಜನೆಗೆ ಡಿ ಪಿ ಆರ್ ಸಿದ್ಧವಾಗಿದ್ದು, ಈಗಾಗಲೇ ಅನುಮತಿಗಾಗಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗಿದೆ. ಕೇಂದ್ರದಲ್ಲಿ ರಾಜ್ಯದ ಮಂತ್ರಿ ಹಾಗೂ ಸಂಸದರು ಅನುಮತಿ ಕೊಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.
ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಕಾವೇರಿ ಐದನೇ ಹಂತದ ಕುಡಿಯುವ ನೀರು ಯೋಜನೆಗೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೂ ಅನುಕೂಲವಾಗುತ್ತದೆ. ಆದರೂ ರಾಜಕೀಯಕ್ಕಾಗಿ ತಕರಾರು ತೆಗೆಯುತ್ತಿದ್ದಾರೆ. ಕೇಂದ್ರ ಸರ್ಕಾರ ಮನಸ್ಸು ಮಾಡಿದರೆ ಈ ಯೋಜನೆ ಸಾಧ್ಯವಾಗುತ್ತದೆ. ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದರು.