Home » ಮುಡಾ ಅಧ್ಯಕ್ಷ ಮರಿಗೌಡ ರಾಜೀನಾಮೆ
 

ಮುಡಾ ಅಧ್ಯಕ್ಷ ಮರಿಗೌಡ ರಾಜೀನಾಮೆ

by Kundapur Xpress
Spread the love

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರು ಕೆಸರೆಯ ಜಮೀನಿನ ಬದಲಿಗೆ ಮೈಸೂರಿನ ವಿಜಯನಗರದಲ್ಲಿರುವ ಕೋಟ್ಯಂತರ ರೂ. ಮೌಲ್ಯದ 14 ನಿವೇಶನಗಳನ್ನು ಅಕ್ರಮವಾಗಿ ಪಡೆದುಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಸ್ವಪಕ್ಷೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಮುಡಾ ಅಧ್ಯಕ್ಷ ಕೆ.ಮರಿಗೌಡ ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಕಾಸ ಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಅವರನ್ನು ಭೇಟಿಯಾದ ಮರಿಗೌಡ ರಾಜೀನಾಮೆ ಪತ್ರ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನೀಡಲು ಮುಖ್ಯಮಂತ್ರಿಯವರು ಸೂಚನೆ ನೀಡಿದ್ದರು. ಅಲ್ಲದೆ, ಇತ್ತೀಚೆಗೆ ನನ್ನ ಆರೋಗ್ಯವೂ ಸರಿಯಿಲ್ಲ ಎಂದರು

   

Related Articles

error: Content is protected !!