ದುಬೈ : 9ನೇ ಆವೃತ್ತಿ ಐಸಿಸಿ ಮಹಿಳಾ ಟಿ-20 ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಬರೋಬ್ಬರಿ 14 ವರ್ಷಗಳ ಬಳಿಕ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿದ್ದ ಕಿವೀಸ್ ತಂಡ ಚೊಚ್ಚಲ ಟ್ರೋಫಿ ಗೆದ್ದು ಸಂಭ್ರಮಿಸಿತು. ದಕ್ಷಿಣ ಆಫ್ರಿಕಾ ಸತತ 2ನೇ ಬಾರಿಯೂ ರನ್ನರ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.
ಭಾನುವಾರ ನಡೆದ ಫೈನಲ್ ಹಣಾಹಣಿಯಲ್ಲಿ ಕಿವೀಸ್ 32 ರನ್ ಗೆಲುವು ಸಾಧಿಸಿತು. ಮೊದಲು ಬ್ಯಾಟ್ ಮಾಡಿದ ಕಿವೀಸ್ 20 ಓವರ್ಗಳಲ್ಲಿ 5 ವಿಕೆಟ್ಗೆ 158 ರನ್ ಕಲೆಹಾಕಿತು. ಸುಜೀ ಬೇಟ್ಸ್ (32) ತಂಡಕ್ಕೆ ಉತ್ತಮ ಆರಂಭ ಒದಗಿಸಿದರೆ, ಅಮೇಲಿ ಕೇರ್(43) ಹಾಗೂ ಬೂಕ್ ಹಾಲಿಡೆ(38) ಅಬ್ಬರದ ಆಟವಾಡಿ ತಂಡದ ಮೊತ್ತವನ್ನು 150 ರ ಗಡಿ ದಾಟಿಸಿದರು.
ದೊಡ್ಡಗುರಿ ಬೆನ್ನತ್ತಿದದ.ಆಫ್ರಿಕಾ ಉತ್ತಮ ಆರಂಭದ ಹೊರತಾಗಿಯೂ 9 ವಿಕೆಟ್ ಗೆ 126 ರನ್ ಗಳಿಸಿ ಸೋಲೊಪ್ಪಿಕೊಂಡಿತು.