ಬೆಂಗಳೂರು : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಂಗೇರುವುದು ನಿಶ್ಚಿತವಾಗಿದ್ದು, ಚುನಾವಣಾ ಅಖಾಡಕ್ಕೆ ಇಳಿಯುವ ಉದ್ದೇಶದಿಂದ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಅವರು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿಯಾಗಿ ಬಿಜೆಪಿಯ ಚಿಹ್ನೆಯಿಂದ ಸ್ಪರ್ಧಿಸಲು ಬಯಸಿದ್ದ ಯೋಗೇಶ್ವರ್ ಅವರ ಬಗ್ಗೆ ಜೆಡಿಎಸ್ ಒಪ್ಪದೇ ಇದ್ದುದರಿಂದ ಅನಿವಾರ್ಯವಾಗಿ ಪಕ ತೊರೆಯಲೂ ಮುಂದಾಗಿದ್ದಾರೆ. ಪಕ್ಷೇತರ ಅಥವಾ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ನಿರೀಕ್ಷೆಯಿದೆ. ಸೋಮವಾರ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿದ ಯೋಗೇಶ್ವರ್ ಅವರು ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದರು
ಕಾಂಗ್ರೆಸ್ ಸೇರಿ ಸ್ಪರ್ಧೆ ಸಾಧ್ಯತೆ : ಇಂದು ಸಿದ್ದು, ಡಿಕೆಶಿ ಸಭೆ
ಬಿಜೆಪಿಯ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆಯಿದ್ದು, ಕಾಂಗ್ರೆಸ್ ಪಕ್ಷ ಸೇರಿದರೆ ಅವರೇ ಅಭ್ಯರ್ಥಿಯಾಗುವುದು ನಿಶ್ಚಿತ ಎಂದು ತಿಳಿದುಬಂದಿದೆ. ಚನ್ನಪಟ್ಟಣ ಎನ್ಡಿಎ ಟಿಕೆಟ್ ಜೆಡಿಎಸ್ ಪಕ್ಷಕ್ಕೆ ಎಂಬುದು ಅಂತಿಮವಾಗಿದೆ.