Home » ಜಾಂಬೂರು ಇಲ್ಲಿ ಒಂದು ದಿನದ ಶಿಬಿರ
 

ಜಾಂಬೂರು ಇಲ್ಲಿ ಒಂದು ದಿನದ ಶಿಬಿರ

by Kundapur Xpress
Spread the love

ಕುಂದಾಪುರ : ಗಾಂಧೀಜಿಯವರ ಜನ್ಮ ಶತಾಬ್ಧಿಯ ಪ್ರಯುಕ್ತ ಪ್ರಾರಂಭಿಸಲಾದ ರಾಷ್ಟ್ರೀಯ ಸೇವಾ ಯೋಜನೆ ಕಾಲೇಜುಗಳಲ್ಲದೆ ಪ್ರೌಢಶಾಲಾ ಹಂತಗಳಲ್ಲಿಯೂ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಈ ಘಟಕಗಳಲ್ಲಿ ನೋಂದಣೆ ಮಾಡಿಕೊಂಡು ವೈಯುಕ್ತಿಕ ಬೆಳವಣೆಗೆಯೊಂದಿಗೆ ರಾಷ್ಟ್ರ ನಿರ್ಮಾಣದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವುದು ಅತ್ಯಂತ ಹೆಮ್ಮಯ ವಿಚಾರ. ನಿಮ್ಮ ಈ ಶಿಸ್ತು, ಸಮಾಜಿಕ ಕಳಕಳಿ, ಸಮಯಪ್ರಜ್ಞೆ ಮುಂದಿನ ದಿನಗಳಲ್ಲಿಯೂ ಸಹ ಮುಂದುವರಿಸಿಕೊಂಡು ಹೋದಲ್ಲಿ ಸಮಾಜದಲ್ಲಿ ಅತ್ಯುತ್ತಮ ಪ್ರಜೆಯಾಗಿ ಬದುಕಲು ಸಾಧ್ಯ” ಎಂದು ಶ್ರೀನಾಥ ರಾವ್ ಜಾಂಬೂರು, ವಕೀಲರು ಕುಂದಾಪುರ ಇವರು ತಿಳಿಸಿದರು. ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2 ರ ವತಿಯಿಂದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಜಾಂಬೂರು, ಉಳ್ಳೂರು-74 ಇಲ್ಲಿ ಆಯೋಜಿಸಲಾದ ಒಂದು ದಿನದ ಶಿಬಿರವನ್ನು ಉದ್ಘಾಟಿಸಿ ಸ್ವಯಂಸೇವಕರಿಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ರಾಮರಾಯ ಆಚಾರ್ಯ ವಹಿಸಿ ಇಂತಹ ಶಿಬಿರಗಳಲ್ಲಿ ಭಾಗವಹಿಸು ವಿದ್ಯಾರ್ಥಿಗಳಲ್ಲಿ ಇರುವ ವಿಬಿನ್ನ ಪ್ರತಿಭೆಗಳನ್ನು ಅನಾವರಣಗೊಳಿಸಲು ಸಾಧ್ಯ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಉದಯ ನಾಯ್ಕ, ಅಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿ, ರಾಜೇಂದ್ರ ಬೆಚ್ಚಳ್ಳಿ, ಅಧ್ಯಕ್ಷರು, ಬೋಜ ಪೂಜಾರಿ ಚಾರಿಟೇಬಲ್ ಟ್ರಸ್ಟ್ ಬೆಚ್ಚಳ್ಳಿ, ಶ್ರೀ ವಿಶ್ವನಾಥ ತುಂಬಿಕಲ್ಲಾಯ, ಅಧ್ಯಕ್ಷರು, ಹಳೆ ವಿದ್ಯಾರ್ಥಿ ಸಂಘ, ನಾಗರತ್ನ ಬೋವಿ, ತೆಂಕೂರು, ಉಪಾಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿ, ಸಹ ಶಿಬಿರಾಧಿಕಾರಿಗಳಾದ ನಾಗರಾಜ ವೈದ್ಯ ಎಂ. ವೆಟರನ್ ರವಿಚಂದ್ರ ಹೆಚ್. ಎಸ್. ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ರಕ್ಷಿತಾ ಮತ್ತು ತಂಡದವರ ಯೋಜನಾ ಗೀತೆಯೊಂದಿಗೆ ಪ್ರಾರಂಭಿಸಲಾಯಿತು. ಶಿಬಿರವನ್ನು ಸಂಘಟಿಸಿದ ರಾಷ್ಟ್ರಿಯ ಸೇವಾ ಯೋಜನಾ ಘಟಕ 1 ರ ಕಾರ್ಯಕ್ರಮಾಧಿಕಾರಿ ಸಂತೋಷ ನಾಯ್ಕ ಹೆಚ್ ಪ್ರಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಘಟಕದ ನಾಯಕಿ ದೀಪಶ್ರೀ ನಿರೂಪಿಸಿದರು. ವಿದ್ಯಾಶ್ರೀ ವಂದಿಸಿದರು

ಶಿಬಿರದ ಸಮಾರೋಪ ಭಾಷಣ ಮಾಡಿದ ಮನೋರಾಜ್ ಶೆಟ್ಟಿ ಜಾಂಬೂರು, ಅಧೀಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಇವರು ಇಂತಹ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸಕರಾತ್ಮಕ ಬೆಳವಣಿಗೆಗೆ ಸಹಕಾರಿಯಾಗಿದ್ದು, ರಾಷ್ಟ್ರೀಯ ಸೇವಾ ಯೋಜನೆಯು ನಿಜವಾದ ಅರ್ಥದಲ್ಲಿ ದೇಶ ಕಟ್ಟುವ ಸಂಘಟನೆಯಾಗಿದ್ದು, ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ಇದರಲ್ಲಿ ಸೇರಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಸಮಾರೋಪ ಕಾರ್ಯಕ್ರಮದಲ್ಲಿ ಭಾಗ್ಯಲಕ್ಷ್ಮೀ ಬಿ. ಆರ್, ಮುಖ್ಯ ಶಿಕ್ಷಕರು, ಪ್ರಶಾಂತ ಹೆಗ್ಡೆ ಜಾಂಬೂರು, ಅಸಿಸ್ಟೆಂಟ್ ಇಂಜಿನೀಯರ್ (ಗ್ರೇಡ್ 1), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ತೀರ್ಥಹಳ್ಳಿ, ರಾಘವೇಂದ್ರ ಶೆಟ್ಟಿ, ಘಟಕದ ನಾಯಕ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಯೋಜನಾ ಗೀತೆಯೊಂದಿಗೆ ಪ್ರಾರಂಭಿಸಲಾಯಿತು. ಸಹ ಶಿಬಿರಾಧಿಕಾರಿ ವೆಟರನ್ ರವಿಚಂದ್ರ ಹೆಚ್ ಎಸ್, ಅತಿಥಿಗಳನ್ನು ಸ್ವಾಗತಿಸಿದರು, ನಾಗರಾಜ ವೈದ್ಯ ವಂದಿಸಿದರು. ಸ್ವಯಂಸೇವಕಿ ರುಚಿತಾ ಖಾರ್ವಿ ಕಾರ್ಯಕ್ರಮ ನಿರೂಪಿಸಿದರು.

ಶಿಬಿರದಲ್ಲಿ ಶಾಲಾ ಆವರಣವನ್ನು ಸ್ವಚ್ಚಗೊಳಿಸಿ ತರಕಾರಿ ತೋಟವನ್ನು ನಿರ್ಮಿಸಲಾಯಿತು. ಇದೇ ಸಂದರ್ಭದಲ್ಲಿ ಶಾಲೆಗೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು

   

Related Articles

error: Content is protected !!