ಕುಂದಾಪುರ : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಇದರ ವ್ಯವಹಾರ ಆಡಳಿತ ವಿಭಾಗದ ಆಶ್ರಯದಲ್ಲಿ ನಡೆಯಲಿರುವ ನೋವೇಶನ್ ಮ್ಯಾನೇಜ್ಮೆಂಟ ಫೆಸ್ಟ್ -2024ನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅವರು ಉದ್ಘಾಟಿಸಿದರು.
ಬಿಬಿಎ ಕೋರ್ಸ್ ಜಾಗತಿಕವಾಗಿ ಪ್ರಾಮುಖ್ಯತೆಯನ್ನು ಪಡೆದುಕೊಂಡಿದ್ದು, ಆಡಳಿತ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ವಿಫುಲವಾದ ಅವಕಾಶವನ್ನು ಕಲ್ಪಿಸುತ್ತಿದ್ದು ವಿದ್ಯಾರ್ಥಿಗಳು ತಮ್ಮನ್ನು ಉದ್ಯಮ, ವ್ಯವಹಾರ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಈ ಕೋರ್ಸ್ ಉಪಯುಕ್ತವಾದದ್ದು ಎಂದು ಹೇಳಿದರು. ಆ ಹಿನ್ನೆಲೆಯಲ್ಲಿ ಆಯೋಜಿಸಿರುವ ನೋವೇಶನ್ ಮ್ಯಾನೇಜ್ಮೆಂಟ್ ಫೆಸ್ಟ್ನ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ, ಸಂಯೋಜಕರಾದ ಶ್ರೀ ರಜತ್ ಬಂಗೇರ, ವಿಭಾಗದ ಪ್ರಾಧ್ಯಾಪಕರುಗಳಾದ ಶ್ರೀ ಹರೀಶ್ ಬಿ, ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ, ಚೈತಾಲಿ, ವಿದ್ಯಾರ್ಥಿ ಪ್ರತಿನಿಧಿಗಳಾದ ಶ್ರದ್ದಾ ಆರ್. ಹಾಗೂ ಕಿರಣ್ ಮತ್ತು ಕಾಲೇಜಿನ ಬೋಧಕ- ಬೋಧಕೇತರ ವೃಂದ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
ವಿದ್ಯಾರ್ಥಿಗಳಾದ ಅಕ್ಷಿತಾ ಮತ್ತು ಐಶ್ವರ್ಯ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.