Home » ಉಪ ಚುನಾವಣೆ ನಂತರ ಸಿದ್ದರಾಮಯ್ಯ ರಾಜೀನಾಮೆ
 

ಉಪ ಚುನಾವಣೆ ನಂತರ ಸಿದ್ದರಾಮಯ್ಯ ರಾಜೀನಾಮೆ

ಬಿ ವೈ ವಿಜಯೇಂದ್ರ

by Kundapur Xpress
Spread the love

ಕೊಟ್ಟೂರು : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಂತರ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅವರು ರಾಜೀನಾಮೆ ನೀಡುವುದನ್ನು ಯಾವುದೇ ಶಕ್ತಿ ತಡೆಯಲಾರದು. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಪೆರೋಲ್ ಮೇಲೆ ಹೊರಗಿದ್ದಾರೆ ಎಂದು ಬಿಜೆಪಿ ರಾಜ್ಯಾ ಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಶುಕ್ರವಾರ ಉಜ್ಜಯನಿ ಸದ್ದರ್ಮ ಪೀಠಕ್ಕೆ ಆಗಮಿಸಿ ಜಗದ್ಗುರುಗಳಿಂದ ಆಶೀರ್ವಾದ ಪಡೆದ ನಂತರ  ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಡಾ ಹಗರಣದ ತನಿಖೆ ತೀವ್ರಗತಿಯಲ್ಲಿ ಸಾಗಿದೆ. ಇದರ ಸತ್ಯಾಸತ್ಯತೆ ಸಿದ್ದರಾಮಯ್ಯ ಅವರ ನಿಜವಾದ ಮುಖವಾಡ ಬಯಲಿಗೆ ತರಲಿದೆ. ಈ ಬಗ್ಗೆ ಜನ ಗಮನಹರಿಸದಿರುವಂತೆ ಮಾಡುವ ಪ್ರಯತ್ನವನ್ನು ಉಪ ಚುನಾವಣೆಯ ಪ್ರಚಾರದ ವೇಳೆ ಮಾಡತೊಡಗಿದ್ದಾರೆ ಎಂದು ಹೇಳಿದರು.

   

Related Articles

error: Content is protected !!