Home » ಸೈಲ್‌ಗೆ 7 ವರ್ಷ ಜೈಲ್ 44ಕೋಟಿ ದಂಡ
 

ಸೈಲ್‌ಗೆ 7 ವರ್ಷ ಜೈಲ್ 44ಕೋಟಿ ದಂಡ

by Kundapur Xpress
Spread the love

ಬೆಂಗಳೂರು : ಬೇಲೆಕೇರಿ ಅದಿರು ನಾಪತ್ತೆ ಸಂಬಂಧ ಆರು ಪ್ರಕರಣದಲ್ಲೂ ಅಪರಾಧಿಗಳೆಂದು ಘೋಷಿಸಲ್ಪಟ್ಟಿದ್ದ ಕಾರವಾರ ಕ್ಷೇತ್ರದ ಶಾಸಕ ಸತೀಶ್ ಸೈಲ್ ಸೇರಿದಂತೆ ಎಲ್ಲ ಏಳು ಅಪರಾಧಿಗಳಿಗೆ ಜನಪ್ರತಿನಿಧಿಗಳ ವಿಶೇಷ’ ನ್ಯಾಯಾಲಯವು ಏಳು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ಒಟ್ಟು 44 ಕೋಟಿ ರು.ಗಿಂತ ಹೆಚ್ಚುದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಈ ಮೂಲಕ 14 ವರ್ಷದ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಕ್ಕಂತಾಗಿದೆ.

ಎರಡು ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆಗೊಳ ಗಾಗಿರುವ ಹಿನ್ನೆಲೆಯಲ್ಲಿ ಸತೀಶ್ ಸೈಲ್ ಅವರ ಶಾಸಕ ಸ್ಥಾನಕ್ಕೆ ಇದೀಗ ಕಂಟಕ ಎದುರಾಗಿದೆ. ಒಂದು ವೇಳೆ ಅವರು ಅನರ್ಹಗೊಂಡರೆ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಕಡಿಮೆ ಮತಗಳ (2318) ಅಂತರದಿಂದ ಪರಾಭವಗೊಂಡಿದ್ದ ಬಿಜೆಪಿಯ ರೂಪಾಲಿ ನಾಯ್ಕ ಅವರಿಗೆ ಮತ್ತೇ ಸ್ಪರ್ಧಿಸುವ ಅವಕಾಶ ಸಿಗಲಿದೆ.

ಶಿಕ್ಷೆ ಪ್ರಕ ಟ:

ಪ್ರಕರಣ ಸಂಬಂಧ ಗುರುವಾರ ತೀರ್ಪು ನೀಡಿದ್ದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್, ಶನಿವಾರ ಶಿಕ್ಷೆ ಪ್ರಮಾಣ ಪ್ರಕ ಟಿಸಿದರು. ಅದರಂತೆ ಅಪರಾಧಿಗಳಿಗೆ ವಂಚನೆ ಪ್ರಕರಣದಲ್ಲಿ 7 ವರ್ಷ, ಒಳಸಂಚು ಪ್ರಕರಣದಲ್ಲಿ 5 ವರ್ಷ ಮತ್ತು ಕಳ್ಳತನ ಪ್ರಕರಣದಲ್ಲಿ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಈಗಾಗಲೇ ಜೈಲಿನಲ್ಲಿ ಕಳೆದಿರುವ ಶಿಕ್ಷೆ ಪ್ರಮಾಣವನ್ನು ಹೊರತುಪಡಿಸಿ, ಉಳಿದ ಶಿಕ್ಷೆಯನ್ನು ದೋಷಿತರು ಅನುಭವಿಸಬೇಕೆಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ

   

Related Articles

error: Content is protected !!