ಬೆಂಗಳೂರು : ಕಾಂಗ್ರೆಸ್ ಸರ್ಕಾರ ಹಾಗೂ ವಕ್ಟ್ ಬೋರ್ಡ್‌ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದೆ. ಬಡ ರೈತರ ಜಮೀನು ಕಬಳಿಸಲು ಎಲ್ಲಾ ಪ್ರಯತ್ನ ಮಾಡಿದ್ದು ಈ ಕುರಿತು ಸಿಎಂ ಸಿದ್ದರಾಮಯ್ಯ ತಕ್ಷಣ ಸ್ಪಷ್ಟಿಕರಣ ನೀಡಬೇಕೆಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಆಗ್ರಹಿಸಿದ್ದಾರೆ.
ವಿಜಯಪುರ ಜಿಲ್ಲೆಯ ಹೊನವಾಡ ಗ್ರಾಮದಲ್ಲಿ ಸುಮಾರು 12 ಸಾವಿರ ಹಾಗೂ ಇಡೀ ಜಿಲ್ಲೆಯಲ್ಲಿ 15 ಸಾವಿರ ಎಕರೆ ಭೂಮಿ ಕಬಳಿಸಲು ವಕ್ಸ್ ಬೋರ್ಡ್ ಯೋಜನೆ ರೂಪಿಸಿದೆ. ಇದಕ್ಕಾಗಿ ಕಂದಾಯ ಇಲಾಖೆಯಿಂದ 139 ರೈತರಿಗೆ ತಿಳಿವಳಿಕೆ ನೋಟಿಸ್ ನೀಡಲಾಗಿದೆ. ಇದು ಸ್ಪಷ್ಟವಾಗಿ ಸರ್ಕಾರದಿಂದಲೇ ನಡೆಯು ತ್ತಿರುವ ಲ್ಯಾಂಡ್ ಜಿಹಾದ್ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಕ್ಸ್ ಆಸ್ತಿ ಹೆಸರಿನಲ್ಲಿ ಲ್ಯಾಂಡ್ ಜಿಹಾದ್ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ದೌರ್ಜನ್ಯ ವಿರೋಧಿಸಿ ವಿಜಯಪುರದ ರೈತರು ಈ ವರ್ಷ ದೀಪಾವಳಿ ಆಚರಿಸದಿರಲು ನಿರ್ಧರಿಸಿದ್ದಾರೆ. ಅನ್ನ ನೀಡುವ ರೈತರ ಭೂಮಿಗೆ ಕನ್ನ ಹಾಕಿ, ರೈತರ ಮನೆ ದೀಪ ಕಸಿದುಕೊಂಡ ಕಾಂಗ್ರೆಸ್ ಸರ್ಕಾರಕ್ಕೆ ಅನ್ನದಾತರ ಶಾಪ ತಟ್ಟದೇ ಇರದು ಎಂದು ಎಚ್ಚರಿಸಿದ್ದಾರೆ.
ಕೇಂದ್ರ ಸರ್ಕಾರ ಜಂಟಿ ಸಂಸದೀಯ ಸಮಿತಿ ರಚಿಸಿ, ಎಲ್ಲ ವಕ್ಸ್ ಬೋರ್ಡ್ ಗಳಿಂದ ಮಾಹಿತಿ ಕೇಳಿದೆ. ಆದರೆ ಕರ್ನಾಟಕದ ವಕ್ ಬೋರ್ಡ್ ಸ್ವಾಯತ್ತ ಸಂಸ್ಥೆ ನಾವು ಮಾಹಿತಿ ಕೊಡುವುದಿಲ್ಲ ಎಂದು ಸಚಿವ ಜಮೀರ್ ಅಹಮದ್ ಹೇಳಿದ್ದಾರೆ. ಹಳೆಯ ಎಲ್ಲ ನಿಯಮ, ಕಾನೂನುಗಳಿಗೆ ಮೋದಿ ಸರ್ಕಾರ ಬದಲಾವಣೆ ತರಲಿದೆ. ಇದಕ್ಕೂ ಮುನ್ನ ಆದಷ್ಟು ಕರ್ನಾಟಕದ ಭೂಮಿ ಕಬಳಿಸಬೇಕೆಂಬುದು ಇವರ ಉದ್ದೇಶ ಎಂದು ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.