Home » ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
 

ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

by Kundapur Xpress
Spread the love

ನವದೆಹಲಿ : ಕನ್ನಡ ರಾಜ್ಯೋತ್ಸವ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದ ಜನತೆಗೆ ಕನ್ನಡದಲ್ಲೇ ರಾಜ್ಯೋತ್ಸವದ ಶುಭ ಹಾರೈಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ, ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹಾಗೂ ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ ಎಂದು ಬರೆದುಕೊಂಡಿದ್ದಾರೆ.

   

Related Articles

error: Content is protected !!