ಚನ್ನಪಟ್ಟಣ : ರಾಜ್ಯದ ಕಾಂಗ್ರೆಸ್ ಸರ್ಕಾರ ಎಲ್ಲಾ ಆಸ್ತಿಯನ್ನೂ ವಕ್ಸ್‌ಗೆ ಒಪ್ಪಿಸಲು ಹೊರಟಿದೆ. ವಕ್ಸ್ ಕಬಂಧ ಬಾಹುಗಳು ಎಲ್ಲೆಡೆ ಚಾಚಿಕೊಳ್ಳುತ್ತಿದ್ದು, ರೈತರು ಕೂಡಲೇ ತಾಲೂಕು ಕಚೇರಿಗೆ ಹೋಗಿ ತಮ್ಮ ಭೂ ದಾಖಲೆಗಳನ್ನು ಪರಿಶೀಲನೆ ಮಾಡಿಕೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಸಲಹೆ ನೀಡಿದರು.
ಚಕ್ಕೆರೆ ಗ್ರಾಮದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಪರ ಪ್ರಚಾರ ಮಾಡಿದ ಅವರು. ಇವತ್ತು ವಕ್ಫ್ ಮಾರಿ ಚನ್ನಪಟ್ಟಣಕ್ಕೂ ವಕ್ಕರಿಸಿದ್ದು, ಯಲಿಯೂರು ಬಳಿ ಹಿಂದೂಗಳ ಸ್ಮಶಾನಕ್ಕೂ ಅದರ ಕಣ್ಣು ಬಿದ್ದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನೂರಾರು ವರ್ಷಗಳಿಂದ ರೈತರು ಭೂಮಿಯಲ್ಲಿ ಬಾಳಿ ಬದುಕುತ್ತಿದ್ದಾರೆ. ಆದರೆ, ಇವರು ಕೊಟ್ಟಿ ದಾಖಲೆಗಳನ್ನು ಸೃಷ್ಟಿ ಮಾಡಿಕೊಂಡು ಅದಕ್ಕೂ ಹಿಂದಿನಿಂದಲೂ ಈ ಭೂಮಿ ನಮ್ಮ ವಶದಲ್ಲಿತ್ತು ಎಂದು ತಗಾದೆ ತೆಗೆಯುತ್ತಿದ್ದಾರೆ. ವಕ್ಸ್ ಎಷ್ಟರ ಮಟ್ಟಿಗೆ ಭೂಮಿ ಹೊಂದಿದೆ ಎಂದರೆ ಭಾರತೀಯ ಸೇನೆಗಿಂತ ಜಾಸ್ತಿ ಭೂಮಿ ವಕ್ಸ್ ಮಂಡಳಿ ವಶದಲ್ಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.