ಡೆಹ್ರಾಡೂನ್ : ಉತ್ತರಾಖಂಡದ ಅಲ್ಲೋರಾ ಜಿಲ್ಲೆಯಲ್ಲಿ ಖಾಸಗಿ ಬನ್ನೊಂದು ಸೋಮವಾರ 200 ಮೀ. ಆಳದ ಪ್ರಪಾತಕ್ಕೆ ಉರುಳಿ ಬಿದ್ದಿದ್ದು ಕನಿಷ್ಠ 36 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ದುರ್ಘಟನೆಯಲ್ಲಿ 24 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ 4 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಹೃಷಿಕೇಶದ ಏಮ್ಸ್ ಮತ್ತು ಸುಶೀಲಾ ತಿವಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಗಢವಾಲ್‌ನ ಪೌಢಿಯಿಂದ ಕುಮಾವ್‌ನ ರಾಮನಗರಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ. 43 ಆಸನಗಳ ವ್ಯವಸ್ಥೆ ಇದ್ದ ಬಸ್‌ನಲ್ಲಿ 60 ಜನರನ್ನು ಕರೆದೊಯ್ಯಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಮೃತ ಪಟ್ಟ ಕುಟುಂಬಗಳಿಗೆ ತಲಾ 4 ಲಕ್ಷ ರು. ಹಾಗೂ ಗಾಯಗೊಂಡವರಿಗೆ 1 ಲಕ್ಷ ರು. ಪರಿಹಾರ ನೀಡಲಾಗುವುದಾಗಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘೋಷಿಸಿದ್ದಾರೆ