ಮೈಸೂರು : ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಹಗರಣದ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ.
ನ.6 ರಂದು ಬೆಳಗ್ಗೆ 10.00 ಗಂಟೆಗೆ ಮೈಸೂರು ಲೋಕಾಯುಕ್ತ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಪ್ರಕರಣದಲ್ಲಿ ಎ l ಆರೋಪಿ ಸಿದ್ದರಾಮಯ್ಯ ಅವರಿಗೆ ಸೂಚಿಸಿದೆ. ಮುಡಾದಲ್ಲಿ ನಡೆದಿರುವ 50:50 ಅನುಪಾತದ ಅನ್ವಯ ಮೈಸೂರಿನ ವಿವಾದಿತ ಕೆಸರೆ ಜಮೀನಿನ ಬದಲಿಗೆ 14 ನಿವೇಶನಗಳ ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿಯವರು ಪಡೆದಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಈಗಾಗಲೇ ಪ್ರಕರಣದ ಎ2 ಪಾರ್ವತಿ ಸೇರಿದಂತೆ ಜಮೀನು ಮಾರಿದ ದೇವರಾಜು ಸೇರಿ ಹಲವರನ್ನು ವಿಚಾರಣೆಗೊಳಪಡಿಸಿದ್ದಾರೆ.