Home » ನಗರ ಪ್ರಾಧಿಕಾರ ಅಧ್ಯಕ್ಷರಾಗಿ ವಿನೋದ್ ಕ್ರಾಸ್ತಾ
 

ನಗರ ಪ್ರಾಧಿಕಾರ ಅಧ್ಯಕ್ಷರಾಗಿ ವಿನೋದ್ ಕ್ರಾಸ್ತಾ

by Kundapur Xpress
Spread the love

ಕುಂದಾಪುರ : ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಕುಂದಾಪುರ ನಗರದ ಚಿಕ್ಕನಸಾಲು ರಸ್ತೆಯ ನಿವಾಸಿ ವಿನೋದ್ ಕ್ರಾಸ್ತಾ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

ಕುಂದಾಪುರ ಪುರಸಭೆಯ ಮಾಜಿ ಅಧ್ಯಕ್ಷರಾದ  ದಿ. ಎಡ್ರಿನ್ ಕ್ರಾಸ್ತಾ ಹಾಗೂ ಪುರಸಭೆ ಮಾಜಿ ಉಪಾಧ್ಯಕ್ಷೆ ಲೇನಿ ಕ್ರಾಸ್ತಾ ಅವರ ಪುತ್ರನಾದ ವಿನೋದ್ ಕ್ರಾಸ್ತಾ  ಬಿ ಇ ಪದವೀಧರರಾಗಿದ್ದಾರೆ

ಅವರು ನಗರ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಅವರು ಸೇವಾ ಸಂಸ್ಥೆ ಶೆವೋಟ್ ಪ್ರತಿಷ್ಠಾನದ ಅಧ್ಯಕ್ಷ ಹಾಗೂ  ರೋಜರಿ ಕ್ರೆಡಿಟ್ ಕೊ- ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿದ್ದು, ಕೆಥೊಲಿಕ್ ಸಭಾ ಕುಂದಾಪುರ ವಲಯದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಾಧಿಕಾರದ ಸದಸ್ಯರಾಗಿ ಚಂದ್ರಶೇಖರ ಶೆಟ್ಟಿ, ಚಂದ್ರ ಅಮೀನ್, ಮಹಮ್ಮದ್ ಅಲ್ಪಾಜ್ ಅವರನ್ನು ನೇಮಕಗೊಳಿಸಿ ಸರಕಾರದ ಅಧೀನ ಕಾರ್ಯದರ್ಶಿ ಲತಾ ಕೆ. ಆದೇಶ ಹೊರಡಿಸಿದ್ದಾರೆ.

   

Related Articles

error: Content is protected !!