ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಯ ಮುಹೂರ್ತ ನಿಗದಿಯಾಗಿದೆ, ಮುಹೂರ್ತ ಯಾವುದೆಂದು ಅವರೇ ತಿಳಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಚರ್ಚೆ ಮಾಡಿ ಈಗಾಗಲೇ ಸಿದ್ದರಾಮಯ್ಯನವರ ರಾಜೀನಾಮೆಯ ಮುಹೂರ್ತ ನಿಗದಿ ಮಾಡಿದ್ದಾರೆ. ಅವರ ರಾಜೀನಾಮೆ ನಿಶ್ಚಿತವಿದೆ ಎಂದರು. ಸಿದ್ದರಾಮಯ್ಯ ಪೂರ್ಣ ಅವಧಿ ಪೂರೈಸುವುದಿಲ್ಲ. ಅತಿ ಶೀಘ್ರದಲ್ಲೇ ರಾಜೀನಾಮೆ ಕೊಡು ತ್ತಾರೆ. ಐದು ವರ್ಷ ಕಾಲ ಮುಖ್ಯಮಂತ್ರಿ ಆಗಿರುವುದಾಗಿ ರಾಜ್ಯದ ಜನರಿಗೆ ಸಿದ್ದರಾಮಯ್ಯ ಹೇಳಲಿ ನೋಡೋಣ ಎಂದು ವಿಜಯೇಂದ್ರ ಸವಾಲು ಹಾಕಿದರು