Home » ಗೋ ಗ್ರೀನ್ – 2.0 ಜಾಗೃತಿ ಜಾಥಾ
 

ಗೋ ಗ್ರೀನ್ – 2.0 ಜಾಗೃತಿ ಜಾಥಾ

by Kundapur Xpress
Spread the love

ಕುಂದಾಪುರ : ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ ಇಲ್ಲಿನ ಎನ್.ಸಿ.ಸಿ. ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಪರಿಸರ ಮತ್ತು ಮಣ್ಣಿನ ಸಂರಕ್ಷಣೆ ಹಾಗೂ ಗಿಡಗಳನ್ನು ನೆಡುವ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮವನ್ನು ಕುಂದಾಪುರದ ವಿವಿಧ ಭಾಗಗಳಾದ ಟೋಟಲ್ ಗ್ಯಾಸ್ ಬಂಕ್, ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು, ಜ್ಯೂನಿಯರ್ ಕಾಲೇಜು, ತಹಶೀಲ್ದಾರ ಕಛೇರಿ, ಪೊಲೀಸ್ ಸ್ಟೇಶನ್, ಸಂಚಾರಿ ಪೊಲೀಸ್ ಸ್ಟೇಶನ್, ಪುರಸಭೆ, ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು, ಬ್ಯಾರೀಸ್ ಗ್ರೂಪ್ ಆಫ್ ಇನ್ಸಿಟ್ಯೂಷನ್, ಕೋಡಿ ಇಲ್ಲಿ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಮಾತನಾಡಿ, ಪರಿಸರ ಸಂರಕ್ಷಣೆ ಮಹತ್ವವನ್ನು ತಿಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಎನ್.ಸಿ.ಸಿ. ಅಧಿಕಾರಿಗಳಾದ ಲೆಫ್ಟಿನೆಂಟ್ ಹರೀಶ್ ಬಿ., ಶರತ್ ಕುಮಾರ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಎನ್.ಸಿ.ಸಿ. ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

   

Related Articles

error: Content is protected !!