ಪೇಶಾವರ : ಪಾಕಿಸ್ತಾನದ ಕ್ವೆಟ್ಟಾ ರೈಲ್ವೆ ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಅತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ 25 ಮಂದಿ ಮೃತಪಟ್ಟಿದ್ದು, 30 ಜನರು ಗಾಯಗೊಂಡಿದ್ದಾರೆ ಸ್ಫೋಟ ಸಂಭವಿಸಿದಾಗ ನಿಲ್ದಾಣದಲ್ಲಿ ಸುಮಾರು 100 ಜನರು ಇದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ. ಸಾಮಾನ್ಯವಾಗಿ ಜನಸಂಖ್ಯೆ ಹೆಚ್ಚಿರುವ ನಿಲ್ದಾಣದ ಬುಕಿಂಗ್ ಕೌಂಟರ್‌ನಲ್ಲಿ ಸ್ಫೋಟ ಸಂಭವಿಸಿರುವುದು ಆತಂಕ ಸೃ ಷ್ಟಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸ್ಫೋಟದ ಸಮಯದಲ್ಲಿ, ಜಾಫರ್ ಎಕ್ಸ್‌ಪ್ರೆಸ್ ಬೆಳಗ್ಗೆ 9.00 ಗಂಟೆಗೆ (ಸ್ಥಳೀಯ ಸಮಯ) ಪೇಶಾವರಕ್ಕೆ ಹೊರಡಬೇಕಿತ್ತು. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಈ ದಾಳಿಯ ಹೊಣೆವಹಿಸಿಕೊಂಡಿದ್ದು, ರೈಲ್ವೆ ನಿಲ್ದಾಣದಲ್ಲಿ ಬೀಡುಬಿಟ್ಟಿರುವ ಸೈನಿಕರನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬರ್ ದಾಳಿ ನಡೆಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ