ಬೆಂಗಳೂರು : ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ ಪ್ರಕರಣ ಎದುರಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಅ.22ರಂದು ಕರ್ನಾಟಕ ಹೈಕೋರ್ಟ್ ಜಾಮೀನು ಅರ್ಜಿ ತಿರಸ್ಕರಿಸಿದ ಕಾರಣ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು ಸೋಮವಾರ ವಿಚಾರಣೆ ನಡೆಯಲಿದೆ.
ಪ್ರಜ್ವಲ್ ವಿರುದ್ಧ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಮಹಿಳೆ ಘನತೆಗೆ ಧಕ್ಕೆ ಉಂಟು ಮಾಡಿದ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಸಂಬಂಧ 4 ಎಫ್‌ಐಆರ್‌ಗಳು ದಾಖಲಾಗಿವೆ. ಈ ಪೈಕಿ 3ಪ್ರಕರಣದಲ್ಲಿ ಒಂದು ಜಾಮೀನು ಮತ್ತು ಎರಡು ನಿರೀಕ್ಷಣಾ ಜಾಮೀನು ಕೋರಿ ಅಕ್ಟೋಬರ್‌ನಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ನ್ಯಾ| ನಾಗಪ್ರಸನ್ನ ಅವರ ಪೀಠ ಅರ್ಜಿ ತಿರಸ್ಕರಿಸಿತ್ತು. ಹೀಗಾಗಿ ಜಾಮೀನು ಕೋರಿ ಶನಿವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.