ಕುಂದಾಪುರ : ಸಾಲ ಬಾಧೆಯಿಂದ ಬಳಲುತ್ತಿದ್ದ ಕುಂದಾಪುರ ತಾಲೂಕಿನ ಹಟ್ಟಿಯಂಗಡಿ ಗ್ರಾಮದ ಸಂತೋಷ (26 ವರ್ಷ) ಎಂಬವರು ಮನೆ ಬಿಟ್ಟು ನಾಪತ್ತೆಯಾಗಿದ್ದಾರೆ. ನ.5ರಂದು ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿಕೊಂಡಿದ್ದ ಸಂತೋಷ ಬಳಿಕ ಮನೆಯಿಂದ ನಾಪತ್ತೆಯಾಗಿದ್ದರು. ಮೊಬೈಲ್ ಕರೆ ಮಾಡಿದಾಗ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿತ್ತು. ಸಾಲದ ಬಾಧೆ ಕಾರಣದಿಂದ ಮನೆ ಬಿಟ್ಟು ಎಲ್ಲಿಯೋ ಹೋಗಿರುವುದಾಗಿ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.