Home » ಮಾಹಿತಿ ಕಾರ್ಯಗಾರ
 

ಮಾಹಿತಿ ಕಾರ್ಯಗಾರ

by Kundapur Xpress
Spread the love

ಕುಂದಾಪುರ, : ನಗರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಪ್ರವೇಶಕ್ಕಾಗಿ ನಡೆಸುವ ಪಿಜಿಸಿಇಟಿ ಪರೀಕ್ಷೆಯ ಕುರಿತು ಮಾಹಿತಿ ಕಾರ್ಯಗಾರ ಏರ್ಪಡಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರಿನ ಅಭಿಜ್ಞಾ ವಿದ್ಯಾಸಂಸ್ಥೆಯ ನಿರ್ದೇಶಕರಾದ ಶ್ರೀ ಅಭಿಲಾಷ್ ಕ್ಷತ್ರಿಯ ಪರೀಕ್ಷೆಯ ತಯಾರಿ ಹೇಗಿರಬೇಕು, ಪರೀಕ್ಷೆ ಯಾವ ಸಂದರ್ಭದಲ್ಲಿ ನಡೆಸಲಾಗುತ್ತದೆ, ಪರೀಕ್ಷೆಯ ಪೂರ್ವ ತಯಾರಿಯೊಂದಿಗೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಎನ್ನುವುದರ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉನ್ನತ ಶಿಕ್ಷಣವನ್ನು ಪಡೆಯುವಲ್ಲಿ ಪಿಜಿಸಿಇಟಿಯ ಮಹತ್ವವನ್ನು ತಿಳಿಸಿದರು. ಕಾಲೇಜಿನ ಉಪಪ್ರಾಂಶುಪಾಲ ಶ್ರೀ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು.
ನಿರ್ವಹಣಾ ವಿಭಾಗದ ಮುಖ್ಯಸ್ಥೆ ಶ್ರೀಮತಿ ನಂದಾ ರೈ ವಂದಿಸಿದರು. ನಿರ್ವಹಣಾ ವಿಭಾಗದ ಉಪನ್ಯಾಸಕರಾದ ಶ್ರೀ ಹರೀಶ್ ಬಿ. ಸ್ವಾಗತಿಸಿ, ಶ್ರೀ ರಜತ್ ಬಂಗೇರ ಅತಿಥಿಗಳನ್ನು ಪರಿಚಯಿಸಿ, ಅವಿತಾ ಕೊರೆಯಾ ನಿರ್ವಹಿಸಿದರು.

   

Related Articles

error: Content is protected !!