ಜಮ್ಮು : ಜಮ್ಮು- ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಅರಣ್ಯ ಪ್ರದೇಶವೊಂದರಲ್ಲಿ ಉಗ್ರರು ಮತ್ತು ಸೇನೆಯ ನಡುವೆ ಭಾನುವಾರ ನಡೆದ ಗುಂಡಿನ ಚಕಮಕಿ ವೇಳೆ ಜೂನಿಯರ್ ಕಮೀಷನ್ಡ್ ಆಫೀಸರ್ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇತರೆ” ಮೂವರು ಯೋಧರು ಗಾಯಗೊಂಡಿದ್ದಾರೆ. ಇತ್ತೀಚೆಗೆ ಇಬ್ಬರು ಗ್ರಾಮ ರಕ್ಷಣಾ ಸಿಬ್ಬಂದಿಯನ್ನು ಹತ್ಯೆಗೈದ ಉಗ್ರರು ಇಲ್ಲಿನ ಅರಣ್ಯದಲ್ಲಿ ಅಡಗಿರುವ ಮಾಹಿತಿ ಅನ್ವಯ ಸೇನೆ ಕಾರ್ಯಾಚರಣೆ ನಡೆಸಿದ ವೇಳೆ ಎರಡೂ ಬಣಗಳ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಸುಬೇದಾರ್ ರಾಕೇಶ್ ಕುಮಾರ್ ಸಾವನ್ನಪ್ಪಿದ್ದಾರೆ. ಕಾರ್ಯಾಚರಣೆ ಸ್ಥಳದಲ್ಲಿ 3- 4 ಉಗ್ರರು ಸಿಕ್ಕಿ ಬಿದ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ