Home » ಕೋಟ ಅಮೃತೇಶ್ವರಿ ಯಕ್ಷಗಾನ ಮೇಳ ತಿರುಗಾಟ ಆರಂಭ
 

ಕೋಟ ಅಮೃತೇಶ್ವರಿ ಯಕ್ಷಗಾನ ಮೇಳ ತಿರುಗಾಟ ಆರಂಭ

ಪ್ರಶಸ್ತಿ ಪ್ರದಾನ ಕಾರ್ಯಕ್ರಮ

by Kundapur Xpress
Spread the love

ಕೋಟ: ಇಲ್ಲಿನ ಕೋಟದ ಅಮೃತೇಶ್ವರೀ ಶ್ರೀ ದೇಗುಲದ ವತಿಯಿಂದ ನಡೆಸಲ್ಪಡುವ ದಶಾವತಾರ ಮೇಳದ ೨೦೨೪-೨೫ನೇ ವರ್ಷದ ತಿರುಗಾಟವು ನ. ೧೭ನೇ ಆದಿತ್ಯವಾರ ಆರಂಭಗೊಳ್ಳಲಿದ್ದು,ಈ ಪ್ರಯುಕ್ತ ದೇಗುಲದಲ್ಲಿ ಪೂರ್ವಾಹ್ನ ೧೧.ಗಂಟೆಗೆ ಗಣಹೋಮ ಮತ್ತು ಗಣಪತಿ ಪೂಜೆ,ರಾತ್ರಿ ದೇವರ ಪ್ರಥಮ ಸೇವೆ ಆಟದೊಂದಿಗೆ ಪ್ರಾರಂಭವಾಗಲಿದೆ.

ಈ ದಿಸೆಯಲ್ಲಿ ಪ್ರತಿವರ್ಷದಂತೆ ರಾತ್ರಿ ೮.ಕ್ಕೆ ಪ್ರಶಸ್ತಿ ಪ್ರದಾನ ಕಾರ್ಯಕ್ರ ಜರಗಲಿದ್ದು ಸಭೆಯ ಅಧ್ಯಕ್ಷತೆಯನ್ನು ದೇಗುಲದ ಅಧ್ಯಕ್ಷ ಆನಂದ್ ಸಿ. ಕುಂದರ್,ಮುಖ್ಯ ಅಭ್ಯಾಗತರಾಗಿ ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಕೆ. ಎಸ್. ಕಾರಂತ್, ಉದ್ಯಮಿ ಉಮೇಶ್ ರಾಜ್ ಬೆಂಗಳೂರು, ಶುಭಾಶಂಸನೆಯನ್ನು ಸಾಹಿತಿ ಪ್ರೊ. ಉಪೇಂದ್ರ ಸೋಮಯಾಜಿ ಚಿತ್ರಪಾಡಿ, ಯಕ್ಷಗುರು ಪ್ರಸಾದ್ ಕುಮಾರ್ ಮೊಗೆಬೆಟ್ಟು, ನಲ್ನುಡಿಗಳ್ನಾಡಲಿದ್ದಾರೆ ಇದೇ ವೇಳೆ ಶ್ರೀ ಕ್ಷೇತ್ರದಿಂದ ನೀಡುವ ಪ್ರಾಚಾರ್ಯ ದಿ| ಎಮ್. ನಾರ್ಣಪ್ಪ ಉಳ್ಳೂರ ಪ್ರಶಸ್ತಿ ಸಾಲಿಗ್ರಾಮ ಮಕ್ಕಳ ಮೇಳದ ಯಜಮಾನ ಎಚ್. ಶ್ರೀಧರ ಹಂದೆ, ದಿ. ಕೋಟ ವೈಕುಂಠ ಸ್ಮರಣಾರ್ಥ ಅವರ ಪುತ್ರ ಉಮೇಶ್ ರಾಜ್ ಬೆಂಗಳೂರು ಇವರು ನೀಡುವ ಕೋಟ ಯಕ್ಷಕಿನ್ನರ ಕೋಟ ವೈಕುಂಠ ಪುರಸ್ಕಾರವನ್ನು ಕೃಷ್ಣ ನಾಯ್ಕ ಹಾಲಾಡಿ ಪಡೆಯಲಿದ್ದಾರೆ.ನಂತರ ದೇವರ ಸೇವೆ ಭಾಗವಾಗಿ ಯಕ್ಷಗಾನ ಪ್ರದರ್ಶನ ನಡೆಯಲಿದೆ.ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ ಸಿ. ಕುಂದರ್ , ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

   

Related Articles

error: Content is protected !!