ಕೋಟ : ಇಲ್ಲಿನ ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿವರ್ಷ ನಡೆಸಲ್ಪಡುವ ಕನ್ನಡ ರಾಜ್ಯೋತ್ಸವ ಸದ್ಭಾವನಾ 2024 ರ ನಾಡು ನುಡಿಗೆ ಭಾವ ನಮನ ಕಾರ್ಯಕ್ರಮ ಇದೇ ಬರುವ ನವೆಂಬರ್ 16ರ ಸಂಜೆ.6.00 ರಿಂದ ಕೋಟದ ಗಾಂಧಿ ಮೈದಾನದಲ್ಲಿ ಜರಗಲಿದೆ ಈ ಪ್ರಯುಕ್ತ ಪ್ರಸಿದ್ಧ ಸಾಧಕರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರಗಲಿದ್ದು ವಿಶ್ವದ ಶ್ರೇಷ್ಠ ಉದ್ಯಮಿ ಪದ್ಮಶ್ರೀ ಡಾ.ವಿಜಯ ಸಂಕೇಶ್ವರ ಇವರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನಿಸಲಿದೆ.
ಕಾರ್ಕಳದ ಸ್ವಚ್ಛ ಬ್ರಿಗೇಡ್ ಇವರಿಗೆ ವಿಶೇಷ ಪುರಸ್ಕಾರ,ವಿಶೇಷ ಅಭಿನಂದನೆಯನ್ನು ಯಕ್ಷಕಲಾ ಅಕಾಡೆಮಿ ಬೆಂಗಳೂರು ಇದರ ಮುಖ್ಯಸ್ಥ ಕೃಷ್ಣಮೂರ್ತಿ ತುಂಗ ಇವರು ಸ್ವೀಕರಿಸಲಿದ್ದಾರೆ.ಪ್ರತಿಭಾ ಪುರಸ್ಕಾರದ ಭಾಗವಾಗಿ ಬಹುಮುಖ ಪ್ರತಿಭೆಗಳಾದ ಸುಶ್ಮಿತಾ ಕೃಷ್ಣಮೂರ್ತಿ ಸಾಲಿಗ್ರಾಮ, ಪ್ರಜ್ಞಾ ಗೀತಾ ಪೂಜಾರಿ ಇವರುಗಳು ಪಡೆಯಲಿದ್ದಾರೆ.
ಉಡುಪಿಯ ಹೊಸ ಬದುಕು ಆಶ್ರಮಕ್ಕೆ ದಿನಸಿ ಪರಿಕರ,ಅಶಕ್ತ ಅನಾರೋಗ್ಯ ಪೀಡಿತರಿಗೆ ,ವಿಶೇಷ ಚೇತನರಿಗೆ ಸಂಸ್ಥೆ ಮಾಜಿ ಅಧ್ಯಕ್ಷ ದಿ. ಉದಯ ಪೂಜಾರಿ ಸ್ಮರಣಾರ್ಥ ಸಹಾಯಹಸ್ತ ನೀಡಲಿದೆ. ಸ್ಥಳೀಯ ಕನ್ನಡ ಮಾಧ್ಯಮ ಶಾಲೆಗಳಿಗೆ ದತ್ತಿನಿಧಿ,ಅಂಗನವಾಡಿ ಶಾಲೆಗಳಿಗೆ ವಿವಿಧ ಪರಿಕರ ಹಸ್ತಾಂತರ ನಡೆಯಲಿದೆ.ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಕನ್ನಡ ಚಿತ್ರರಂಗ ಹಿರಿಯ ನಟ ಎಸ್ ದೊಡ್ಡಣ್ಣ ಪಾಲ್ಗೊಳ್ಳಲಿದ್ದು,ಕಾರ್ಯಕ್ರಮವನ್ನು ಸಮಾಜಸೇವಕ ಆನಂದ್ ಸಿ ಕುಂದರ್ ಉದ್ಘಾಟಿಸಲಿದ್ದು,ಗಂಗಾವತಿಯ ಶಾಸಕ ಗಾಲಿ ಜನಾರ್ದನ ರೆಡ್ಡಿ ಸಂಸದ ಕೋಟ ಶ್ರೀನಿವಾಸ ಪೂಜಾರಿ,ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ,ಶಾಸಕ ಕಿರಣ್ ಕುಮಾರ್ ಕೊಡ್ಗಿ,ಸಮಾಜಸೇವಕ ಬನ್ನಾಡಿ ನಾರಾಯಣ ಆಚಾರ್ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.ಸಾಂಸ್ಕöÈತಿಕ ಕಾರ್ಯಕ್ರಮದ ಭಾಗವಾಗಿ ಸ್ಥಳೀಯ ಕೋಟತಟ್ಟು ,ಮಣೂರು,ಕಾಸನಗುಂದು ಅಂಗನವಾಡಿ ಪುಟಾಣಿಗಳಿಂದ ನೃತ್ಯ ಸಿಂಚನ,
ಪಂಚವರ್ಣ ಮಹಿಳಾ ಮಂಡಲ ಮಹಿಳೆಯರಿಂದ ಹಾಗೂ ಜಿಲ್ಲೆಯ ಪ್ರಸಿದ್ಧ ನೃತ್ಯ ತಂಡ ಕುಂಭಾಶಿಯ ಮಯೂರಿ ನೃತ್ಯ ತಂಡದಿಂದ ಸಾಂಸ್ಕ್ರತಿಕ ಕಲರವ ರಾತ್ರಿ 9.00ಕ್ಕೆ ಪಿಂಗಾರ್ ಕಲಾವಿದರ್ ಬಿದ್ರೆ ಇವರಿಂದ ಕದಂಬ ನಾಟಕ ಪ್ರದರ್ಶನ ನಡೆಯಲಿದೆ ಎಂದು ಪಂಚವರ್ಣ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಅಧ್ಯಕ್ಷ ಅಜಿತ್ ಅಚಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.