ಬೆಂಗಳೂರು : ಮುಡಾ ಹಗರಣ ವಿಚಾರದಲ್ಲಿ ಜಾರಿ ನಿರ್ಧೇಶನಾಲಯದ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು ರಾಯಚೂರಿನ ಸಂಸದ ಕುಮಾರ್ ನಾಯಕ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಸಿ ಟಿ ಕುಮಾರ್ ಅವರನ್ನು ಪ್ರತ್ಯೇಕವಾಗಿ ತೀವ್ರ ವಿಚಾರಣೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇ.ಡಿ. ಸಂಕಷ್ಟ ದಿನೇ ದಿನೇ ಸನಿಹವಾಗುವ ಸಾಧ್ಯತೆ ಕಂಡುಬಂದಿದೆ.
ಅವರ ಮೈಸೂರಿನ ಆಪ್ತ ಸಿ.ಟಿ.ಕುಮಾರ್ ವಿಚಾರಣೆ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಅವರಿಗೂ ವಿಚಾರಣೆ ಬಿಸಿ ತಲುಪುವ ಸಾಧ್ಯತೆ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಬುಧವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಶಾಂತಿನಗರದಲ್ಲಿನ ಇ ಡಿ ಕಚೇರಿಯಲ್ಲಿ ನಿರಂತರವಾಗಿ ಕುಮಾರ್ ನಾಯಕ್ ಹಾಗೂ ಕುಮಾರ್ ಅವರನ್ನು ವಿಚಾರಣೆ ನಡೆಸಲಾಗಿದೆ