Home » 50 ಶಾಸಕರಿಗೆ 50 ಕೋಟಿ ಆಫರ್
 

50 ಶಾಸಕರಿಗೆ 50 ಕೋಟಿ ಆಫರ್

ಸಿ ಎಂ ಗರಂ

by Kundapur Xpress
Spread the love

ಮೈಸೂರು : ಕಾಂಗ್ರೆಸ್‌ನ 50 ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಆಮಿಷವೊಡ್ಡುವ ಮೂಲಕ ಪ್ರತಿಪಕ್ಷ ಬಿಜೆಪಿಯು ರಾಜ್ಯ ಸರ್ಕಾರವನ್ನು ಕೆಡವಲು ಯತ್ನಿಸಿತ್ತು. ಆದರೆ ಇವರ ಆಮಿಷಕ್ಕೆ ಯಾವುದೇ ಶಾಸಕರು ಬಲಿಯಾಗದಿದ್ದಾಗ ಇದೀಗ ನನ್ನ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಜಿಲ್ಲಾಡಳಿತ ಮತ್ತು ಜಿ.ಪಂ. ವತಿಯಿಂದ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ 470 ಕೋಟಿ ರು. ಮೌಲ್ಯದ ಕಾಮಗಾರಿಗಳ ಉದ್ಘಾಟನೆ ಮತ್ತು ಕಟ್ಟಡಗಳ ಲೋಕಾರ್ಪಣೆ ಮತ್ತು ಶಂಕು ಸ್ಥಾಪನೆ ನೆರವೇರಿಸಿ, ಫಲಾನುಭವಿಗಳಿಗೆ ನೇರವಾಗಿ ಸವಲತ್ತು ವಿತರಿಸಿ ಬುಧವಾರ ಮಾತನಾಡಿದರು.

ನಮ್ಮ ಶಾಸಕರಿಗೆ ತಲಾ 50 ಕೋಟಿ ರು. ಆಫರ್‌ ನೀಡುವ ಅವರಿಗೆ ಇಷ್ಟೊಂದು ಹಣ ಎಲ್ಲಿಂದ ಬರುತ್ತೆ? ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇನಾದರೂ ಅಷ್ಟು ಹಣವನ್ನು ಪ್ರಿಂಟ್ ಹಾಕಿದ್ರಾ ? ಅದೆಲ್ಲ ರಾಜ್ಯವನ್ನು ಲೂಟಿ ಹೊಡೆದ ಹಣ ತಾನೇ ? ಆದರೆ ಈ ಬಾರಿ ನಮ್ಮ ಶಾಸಕರು ಅವರ ಆಮಿಷಕ್ಕೆ ಬಲಿಯಾಗಲಿಲ್ಲ ಇದೇ ಕಾರಣಕ್ಕೆ ಅವರು ಇದೀಗ ನಮ್ಮ ಸರ್ಕಾರ ಕೆಡಹುವ ಅಂದೋಲನ ಶುರು ಮಾಡಿದ್ದಾರೆ ಸುಳ್ಳುಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

   

Related Articles

error: Content is protected !!