ಬೆಂಗಳೂರು : ರಾಜ್ಯ ಸರ್ಕಾರವು ಉಪ ಚುನಾವಣೆ ಮುಕ್ತಾಯಗೊಂಡ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ : ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಶಾಕ್ ನೀಡಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿ ಯಲ್ಲಿ ನಡೆದಿತ್ತು ಎನ್ನಲಾದ ಕೊರೋನಾ ಭ್ರಷ್ಟಾಚಾರದ ಕುರಿತು ನ್ಯಾ. ಮೈಕಲ್ ಡಿ ಆಯೋಗದ ವರದಿ ಆಧರಿಸಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆಗೆ ನಿರ್ಧಾರ ಮಾಡಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಂಡಿದೆ. ತನಿಖೆಗೆ ಐಜಿಪಿ ದರ್ಜೆ ಅಧಿಕಾರಿ ನೇತೃತ್ವ ವಹಿಸಲಿದ್ದಾರೆ. ‘ಕುನ್ಹಾ ಆಯೋಗವು ಬಿಜೆಪಿಯ ಅವಧಿಯ ಕೊರೋನಾ ಭ್ರಷ್ಟಾ ಚಾರವನ್ನು ಎಳೆಎಳೆಯಾಗಿ ತನ್ನ ಮಧ್ಯಂತರ ವರದಿಯಲ್ಲಿ ಬಿಡಿಸಿಟ್ಟಿದೆ ಹಾಗಾಗಿ ಈ ಇಬ್ಬರು ನಾಯಕರಿಗೂ ಈಗ ಸಂಕಷ್ಟ ಎದುರಾಗಿದೆ