ನವದೆಹಲಿ : ಇಸ್ರೇಲ್ನ ಅತ್ಯಂತ ಬಲಿಷ್ಠ ‘ಐರನ್ ಡೋಂ’ ಸೇರಿ ವಿವಿಧ ದೇಶಗಳ ವಾಯು ರಕ್ಷಣಾ ವ್ಯವಸ್ಥೆಯನ್ನು ಭೇದಿಸುವ ಸಾಮರ್ಥ ಹೊಂದಿರುವ ಹೈಪರ್ಸಾನಿಕ್ ಕ್ಷಿಪಣಿ ಪರೀಕ್ಷೆಯನ್ನು ಭಾರತ ಭಾನುವಾರ ಯಶಸ್ವಿಯಾಗಿ ನಡೆಸಿದೆ. ಈ ಮೂಲಕ’ ಇಂಥ ಕ್ಷಿಪಣಿ ಹೊಂದಿರುವ ವಿಶ್ವದ ಕೆಲವೇ ಕೆಲವು ದೇಶಗಳ ಸಾಲಿಗೆ ಭಾರತ ಸೇರಿದೆ. ಇದರ ಯಶಸ್ವಿ ಉಡ್ಡಯನದ ಬೆನ್ನಲ್ಲೇ ‘ಇದೊಂದು ಐತಿಹಾಸಿಕ ಸಾಧನೆ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಣ್ಣಿಸಿದ್ದಾರೆ
ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ) ಈ ಕ್ಷಿಪಣಿ ಅಭಿವೃದ್ಧಿಪಡಿಸಿದೆ.ಈ ಕ್ಷಿಪಣಿಯನ್ನು ಭಾನುವಾರ ಒಡಿಶಾದ ಕರಾವಳಿ ತೀರದಲ್ಲಿ ಯಶಸ್ವಿಯಾಗಿ ಪ್ರಯೋಗಿಸಲಾಯಿತು. ಈ ಕ್ಷಿಪಣಿ 1500 ಕಿ. ಮೀ.ಗಿಂತಲೂ ಹೆಚ್ಚಿನ ದೂರದವರೆಗೆ ಸಿಡಿತಲೆಗಳನ್ನು ಹೊತ್ತೊಯ್ಯಬಲ್ಲ ಶಕ್ತಿ ಹೊಂದಿದೆ.