ಉಡುಪಿ : ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರ ಪೋಟೊವನ್ನು ಬಳಸಿ ನಕಲಿ ಫೇಸ್ ಬುಕ್ ಖಾತೆಯನ್ನು ತೆರೆದು ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಹಣದ ಬೇಡಿಕೆ ಸಲ್ಲಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಸೆನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜಿಲ್ಲಾಧಿಕಾರಿ ಹೆಸರಲ್ಲಿ ಯಾವುದೇ ಸಂದೇಶ ಬಂದಲ್ಲಿ ಸ್ಪಂದಿಸದೆ ಸಂಬಂಧಪಟ್ಟ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡುವಂತೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.