ಬೆಂಗಳೂರು : ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಗುರುವಾರ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನಬಾರ್ಡ್ ನೆರವು ಕಡಿತಗೊಳಿಸದಂತೆ ಮನವಿ ಮಾಡಿದ್ದಾರೆ.
ಹೊಸದಿಲ್ಲಿಯಲ್ಲಿ ಮಾಧ್ಯಮಗಳ ಜತೆಗೆ ಮಾತನಾಡಿದ ಸಿದ್ದರಾಮಯ್ಯ, ನಬಾರ್ಡ್ ನೀಡುವ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕುಗಳಿಗೆ ಹೋಗಬೇಕಾಗುತ್ತದೆ. ವಾಣಿಜ್ಯ ಬ್ಯಾಂಕುಗಳಲ್ಲಿ ಶೇ.10-12 ಬಬಡ್ಡಿ ವಿಧಿಸುತ್ತಾರೆ. ಇದರಿಂದ ರೈತರಿಗೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರಧಾನಮಂತ್ರಿ, ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದಿದ್ದು, ಇದನ್ನು ಆರ್‌ಬಿಐ ಒಪ್ಪಿಲ್ಲ ಎಂದು ಸಚಿವರು ಪ್ರತ್ಯುತ್ತರವನ್ನೂ ಬರೆದಿದ್ದಾರೆ. ನಬಾರ್ಡ್ ಕೇಂದ್ರ ಸರ್ಕಾರದಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಕೇಂದ್ರ ಸಚಿವರೇ ‘ಅಸಹಾಯಕತೆ ವ್ಯಕ್ತಪಡಿಸಿದರೆ ಹೇಗೆ ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.