Home » ಲೋಕಾಯುಕ್ತದಿಂದ ಭ್ರಷ್ಟರ ಬೇಟೆ
 

ಲೋಕಾಯುಕ್ತದಿಂದ ಭ್ರಷ್ಟರ ಬೇಟೆ

by Kundapur Xpress
Spread the love

ಬೆಂಗಳೂರು : ಭ್ರಷ್ಟ ಅಧಿಕಾರಿಗಳ ಹೆಡೆಮುರಿ ಕಟ್ಟಲು ಮುಂದಾಗಿರುವ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಮುಂಜಾನೆ ಏಕಕಾಲದಲ್ಲಿ ರಾಜ್ಯದ 25ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ಈ ವೇಳೆ 26 ಕೋಟಿ ರೂ.ಗೂ ಅಧಿಕ ಮೌಲ್ಯದ  ಅಕ್ರಮ ಸಂಪತ್ತನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ

ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಈ ದಾಳಿ ನಡೆಸಲಾಗಿದೆ. ಬೆಂಗಳೂರು, ಮಂಗಳೂರು, ಮಂಡ್ಯ ಮತ್ತು ಮೈಸೂರಿನಲ್ಲಿ ದಾಳಿ ನಡೆಯಿತು. ಅಬಕಾರಿ ಇಲಾಖೆ ಎಸ್‌ಪಿ ಮೋಹನ್‌ ಕೆ., ಯೋಜನಾ ಇಲಾಖೆಯ ನಿರ್ದೇಶಕ ಎನ್.ಕೆ.ತಿಪ್ಪೇಸ್ವಾಮಿ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ಎಂ.ಸಿ.ಕೃಷ್ಣವೇಣಿ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ನಗ- ನಗದು, ಐಷಾರಾಮಿ ವಸ್ತುಗಳು ಸೇರಿ ಕೋಟ್ಯಂತರ ಮೌಲ್ಯದ ಅಕ್ರಮ ಸಂಪತ್ತನ್ನು ವಶಕ್ಕೆ ಪಡೆದಿದ್ದಾರೆ.

   

Related Articles

error: Content is protected !!