ಬೆಂಗಳೂರು : ಈ ಉಪ ಚುನಾವಣೆ ಫಲಿತಾಂಶ ನನ್ನ ಪಾಲಿಗೆ ಮಹತ್ವದ್ದಾಗಿತ್ತು. ದ್ವೇಷ ಸಾಧನೆಗಾಗಿ ಸುಳ್ಳು ಪ್ರಕರಣ ಅಪಪ್ರಚಾರದಿಂದ ನನ್ನ ಹಾಗೂ ನನ್ನ ಕುಟುಂಬವನ್ನು ಕಟ್ಟಿ ಹಾಕಲು ರಾಜಭವನದಿಂದ ಕೇಂದ್ರ ತನಿಖಾ ಸಂಸ್ಥೆಗಳವರೆಗೆ ಎಲ್ಲವನ್ನೂ ದುರ್ಬಳಕೆ ಮಾಡಿಕೊಂಡ ಬಿಜೆಪಿ, ಜೆಡಿಎಸ್ನವರಿಗೆ ಮತದಾರರು ಫಲಿತಾಂಶದ ಮೂಲಕ ತಕ್ಕ ಉತ್ತರವನ್ನು ನೀಡಿದ್ದಾರೆ ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪ ಚುನಾವಣೆ ಫಲಿತಾಂಶವನ್ನು ವ್ಯಾಖ್ಯಾನಿಸಿದ್ದಾರೆ..
ನಾನು 2ನೇ ಬಾರಿಗೆ ಸಿಎಂ ಆದ ಬಳಿಕ ಬಿಜೆಪಿ, ಜೆಡಿಎಸ್ನವರು ನನ್ನ ಹಾಗೂ ನನ್ನ ಪತ್ನಿಯನ್ನು ಸುಳ್ಳುಗಳಿಂದ ಹಣಿ ಯಲು ಯತ್ನಿಸಿದರು. ನಾಲ್ಕು ದಶಕ ಗಳಿಂದ ನನ್ನ ರಾಜಕೀಯ ಜೀವನ ನೋಡಿರುವ ಜನರು ಬಿಜೆಪಿಯ ಸುಳ್ಳುಗಳ ವಿರುದ್ಧ ಸತ್ಯವನ್ನು ಗೆಲ್ಲಿಸಿದ್ದಾರೆ ಎಂದು ಹೇಳಿದರು
ಉಪ ಚುನಾವಣೆ ವೇಳೆ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್ಲ ನ್ಯಾಯಾಲಯಗಳಿಗಿಂತ ಶ್ರೇಷ್ಠ ನ್ಯಾಯಾಲಯ ಜನತಾ ನ್ಯಾಯಾಲಯ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದಾರೆ. ಜನತಾ ನ್ಯಾಯಾಲಯದಲ್ಲಿ ನಮ್ಮ ಪರ ತೀರ್ಪು ಬಂದಿದೆ. ಈ ತೀರ್ಪಿನಿಂದ ನಮ್ಮ ಸರ್ಕಾರಕ್ಕೆ ಬಲ ಬಂದಿದೆ ಎಂದರು.