ಬರೇಲಿ : ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್ (ಜಿಪಿಎಸ್) ಸಹಾಯದಿಂದ ಸಂಚರಿಸುತ್ತಿದ್ದ ಕಾರೊಂದು ದುರಸ್ತಿ ಹಂತದಲ್ಲಿದ್ದ ಸೇತುವೆಯಿಂದ ಉರುಳಿ ನದಿಗೆ ಬಿದ್ದು ಅದರಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕಾರೊಂದು ಭಾನುವಾರ ಬರೇಲಿಯಿಂದ ಬದೌನ್ ಜಿಲ್ಲೆಯ ದಾತ್‌ಗಂಜ್‌ಗೆ ತೆರಳುತ್ತಿತ್ತು.
ಬೆಳಗ್ಗೆ 10 ಗಂಟೆ ವೇಳೆಗೆ ಖಲ್ಪುರ್-ದಾತ್ ಗಂಜ್ ಪ್ರದೇಶದಲ್ಲಿ ದುರಸ್ತಿ ಹಂತದಲ್ಲಿದ್ದ ಸೇತುವೆಯ ಮಾಹಿತಿ ತಿಳಿಯದೇ ವೇಗವಾಗಿ ಚಲಿಸಿದೆ. ಈ ವೇಳೆ ಕಾರು ರಾಮ್ ಗಂಜ್ ನದಿಗೆ ಉರುಳಿ ಅದರಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಇತ್ತೀಚಿನ ಪ್ರವಾಹದ ವೇಳೆ ಸೇತುವೆ ಒಂದು ಭಾಗ ಕುಸಿದಿತ್ತು. ಆದರೆ ಅದು ಜಿಪಿಎಸ್‌ನಲ್ಲಿ ಪರಿಷ್ಕರಣೆ ಆಗದ ಹಿನ್ನೆಲೆ ಈ ದುರಂತ ಸಂಭವಿಸಿದೆ