ರಾಂಚಿ : ಭರ್ಜರಿ ಬಹುಮತದೊಂದಿಗೆ ಸತತ 2ನೇ ಸಲ ಚುನಾವಣೆಯಲ್ಲಿ ಗೆದ್ದು ದಾಖಲೆ ನಿರ್ಮಿಸಿರುವ ಜೆಎಂಎಂ ನಾಯಕ ಹೇಮಂತ್ ಸೊರೇನ್ ಅವರು ನ.28ರಂದು 4ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಜೆಎಂಎಂ ನೇತೃತ್ವದ ಇಂಡಿಯಾ ಮೈತ್ರಿ ಕೂಟ ಜಾರ್ಖಂಡ್‌ನ 81 ಸ್ಥಾನಗಳ ಪೈಕಿ 56ರಲ್ಲಿ ಜಯಭೇರಿ ಬಾರಿಸಿದೆ. ಭಾನುವಾರ ಸಭೆ ಸೇರಿದ ನೂತನ ಶಾಸಕರು ಹೇಮಂತ್ ಸೊರೇನ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿದರು.ಇದರ ಬೆನ್ನಲ್ಲೇ ಸೊರೇನ್ ನೇತೃತ್ವದ ನಿಯೋಗ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರನ್ನು ಭೇಟಿಯಾಗಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡನೆ ಮಾಡಿತು.