ಕುಂದಾಪುರ : ಕೋಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಣೂರಿನಲ್ಲಿ ಹೆಜ್ಜೇನು ದಾಳಿಯಿಂದ ಎಳು ಮಂದಿ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಇಂದು ನಡೆದಿದೆ
ಹೆಜ್ಜೇನು ದಾಳಿಯಲ್ಲಿ ಗಾಯಗೊಂಡ 7 ಮಂದಿಯನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಲ್ಲಿ ಮೂರು ಮಂದಿಗೆ ಐ ಸಿ ಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಕೋಟ ಸಮೀಪದ ಮಣೂರಿನಲ್ಲಿ ಕಾಂಪೌಂಡ್ ಕೆಲಸ ಮಾಡುತ್ತಿದ್ದ ವೇಳೆ ಹೆಜ್ಜೇನು ಹಿಂಡೊಂದು ಏಕಾಏಕಿ ದಾಳಿ ನಡೆಸಿದೆ
ಹೆಜ್ಜೇನು ದಾಳಿಗೊಳಗಾದ ಕಲ್ಲು ಕೆಲಸದ ಮೇಸ್ತ್ರಿ ಹಾಜಿ ಇಬ್ರಾಹಿಂ ಪಾರಂಪಳ್ಳಿ, ಕಾರ್ಮಿಕರಾದ ಮೊಹಮ್ಮದ್ ಪಾರಂಪಳ್ಳಿ, ಪ್ರಭಾಕರ, ಶೇಖರ್ ಪೂಜಾರಿ ದೇವೇಂದ್ರ ರಾಮ ಹಾಗೂ ಮಾದಿ (ಮಹಿಳೆ) ಎಂಬವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಇಬ್ರಾಹಿಂ.ದೇವೇಂದ್ರ ಹಾಗೂ ಮಾದಿ ಐ ಸಿ ಯು ಘಟಕದಲ್ಲಿದ್ದಾರೆ
ಗಾಯಾಳುಗಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಸರಕಾರಿ ಆಸ್ಪತ್ರೆಯ ಡಾ. ನಾಗೇಶ್ ತಿಳಿಸಿದ್ದಾರೆ