Home » ಗ್ಯಾರಂಟಿ ನಿಲ್ಲಿಸಿ ಅನುದಾನ ಒದಗಿಸಿ
 

ಗ್ಯಾರಂಟಿ ನಿಲ್ಲಿಸಿ ಅನುದಾನ ಒದಗಿಸಿ

ಕೈ ಶಾಸಕನಿಗೆ ನೋಟಿಸ್‌

by Kundapur Xpress
Spread the love

ಬೆಂಗಳೂರು : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಈ ವಿಚಾರವಾಗಿ ಹೇಳಿಕೆ ನೀಡಿರುವ ಶಾಸಕ ಗವಿಯಪ್ಪ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಶೋಕಾಸ್‌ ನೋಟಿಸ್‌ ನೀಡಲಾಗುವುದೆಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು

ಮಂಗಳವಾರ ಅಂಬೇಡ್ಕರ್ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಗ್ಯಾರಂಟಿ ನಿಲ್ಲಿಸಿ ಅನುದಾನ ಕೊಡಿ ಎಂದು ಸಿದ್ದರಾಮಯ್ಯ ಅವರನ್ನು ಕೇಳುತ್ತಿದ್ದೇವೆ ಎಂದು ಶಾಸಕ ಗವಿಯಪ್ಪ ಹೇಳಿದ್ದಾರೆ ಎಂದು ನಾನು ನಂಬುವುದಿಲ್ಲ ಒಂದು ವೇಳೆ ಅವರು ಹೇಳಿಕೆ ಕೊಟ್ಟಿದ್ದೇ ಆಗಿದ್ದರೆ ವಿವರಣೆ ಕೇಳಿ ನೋಟಿಸ್ ನೀಡುತ್ತೇವೆ ಎಂದರು.

ನಾವು ಗ್ಯಾರಂಟಿ ವಿಚಾರದಲ್ಲಿ ರಾಜ್ಯದ ಜನರಿಗೆ ಮಾತು ಕೊಟ್ಟಿದ್ದು ಎಂತಹದೆ ಪರಿಸ್ಥಿತಿ ಬಂದರೂ ನಾವು ಅದಕ್ಕೆ ಬದ್ಧವಾಗಿದ್ದೇವೆ. ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡಬಾರದು ಪ್ರಶ್ನೆ ಮಾಡಿದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ಅನರ್ಹರು ಇದರ ಲಾಭ ಪಡೆಯುತ್ತಿದ್ದರೆ, ಅದನ್ನು ಪರಿಶೀಲಿಸಿ ಸರಿಪಡಿಸಲಾಗುವುದು. ಈ ಯೋಜನೆಗಳಿಂದ ಪ್ರತಿ ಕ್ಷೇತ್ರಕ್ಕೆ 250 ಕೋಟಿಯಷ್ಟು ಹಣ ಹೋಗುತ್ತಿದೆ. ಇದು ಆ ಅಭಿವೃದ್ಧಿಯಲ್ಲವೇ ? ಅಭಿವೃದ್ಧಿ ಕಾರ್ಯಗಳಿಗೂ ನಾವು ಅನುದಾನ ನೀಡುತ್ತಿದ್ದೇವೆ ಎಂದು ಖಾರವಾಗಿ ಪ್ರತಿಕ್ರಿಯಿಸಿದರು. 

   

Related Articles

error: Content is protected !!