Home » ನಾವು ಮಾರಾಟದ ವಸ್ತುವಲ್ಲ : ಜೆಡಿಎಸ್
 

ನಾವು ಮಾರಾಟದ ವಸ್ತುವಲ್ಲ : ಜೆಡಿಎಸ್

by Kundapur Xpress
Spread the love

ಬೆಂಗಳೂರು : ಜೆಡಿಎಸ್ ಶಾಸಕರು ಮಾರಾಟದ ವಸ್ತುವಲ್ಲ ನಮ್ಮ ಶಾಸಕರು ಯಾವ ಆಮಿಷಕ್ಕೂ ಮಾರು ಹೋಗುವುದಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಜೆಡಿಎಸ್ ಕುರಿತು ಚನ್ನಪಟ್ಟಣ ಕ್ಷೇತ್ರದ ವಿಜೇತ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಹೇಳಿಕೆ ಹಿನ್ನೆಲೆಯಲ್ಲಿ ಪಕ್ಷದ ಶಾಸಕರೆಲ್ಲಾ ಒಗ್ಗಟ್ಟಿದ್ದೇವೆ. ಎಂಬ ಸಂದೇಶ ರವಾನಿಸಲು ಬುಧವಾರ ವಿಧಾನಸೌಧದಲ್ಲಿ ಒಟ್ಟಿಗೆ ಪತ್ರಿಕಾಗೋಷ್ಠಿ ನಡೆಸಿದರು.

ಈ ಸಂದರ್ಭದಲ್ಲಿ ಯೋಗೇಶ್ವರ್ ಹೇಳಿಕೆಯನ್ನು ಕಟುವಾಗಿ ಖಂಡಿಸಿ, ಜೆಡಿಎಸ್ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ, ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಸಿ.ಪಿ.ಯೋಗೇಶ್ವ‌ರ್ ಮಾತಿನ ಧಾಟಿಯೇ ಬದಲಾಗಿದೆ ಎಂದು ಹರಿಹಾಯ್ದರು.

   

Related Articles

error: Content is protected !!