ನವದೆಹಲಿ : ಬೆಂಗಳೂರಿನಲ್ಲಿ ನಡೆದ ಭಯೋತ್ಪಾದಕ ಚಟುವಟಿಕೆ ಪ್ರಕರಣದ ಆ ರೋಪಿ, ಲರ್ಷ್ಕ-ಎ-ತೊಯ್ದಾದ ಉಗ್ರ ಸಲ್ಮಾನ್ ಖಾನ್ ನನ್ನು ರುವಾಂಡಾ ಸರ್ಕಾರ ಭಾರತಕ್ಕೆ ಗಡೀಪಾರು ಮಾಡಿದೆ. ಎನ್‌ಐಎ, ರುವಾಂಡಾ ತನಿಖಾ ಸಂಸ್ಥೆ ಎನ್‌ಸಿಬಿ ಮತ್ತು ಇಂಟರ್‌ಪೋಲ್ ಸಹಕಾರದೊಂದಿಗೆ ಸಲ್ಮಾನ್ ನನ್ನು ಗುರುವಾರ ಭಾರತಕ್ಕೆ ಕರೆತರುವಲ್ಲಿ ಸಿಬಿಐ ಯಶಸ್ವಿ ಯಾಗಿದೆ
ಬಂಧಿತ ಸಲ್ಮಾನ್ ರೆಹಮಾನ್ ಖಾನ್, ಪ್ರಕರಣವೊಂದರಲ್ಲಿ ಬೆಂಗಳೂರು ಜೈಲು ಸೇರಿದ್ದ ಈ ವೇಳೆ ಭಯೋತ್ಪಾದಕ ಸಂಚು ಹೆಣೆದಿದ್ದ ಜೊತೆಗೆ ಭಯೋತ್ಪಾದಕ ಚಟುವಟಿಕೆ ನಡೆಸಲು ಶಸ್ತ್ರಾಸ್ತ್ರ ಮದ್ದುಗುಂಡು ಮತ್ತು ಸ್ಫೋಟಕ ಒದಗಿಸುವಲ್ಲಿ ಸಹಾಯ ಮಾಡಿದ್ದ ಎಂದು ಸಿಬಿಐ ಹೇಳಿದೆ.
ಈತನ ವಿರುದ್ಧ ಮೊದಲಿಗೆ ಬೆಂಗಳೂರಿನ ಹೆಬ್ಬಾಳಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಳಿಕ 2023ರಲ್ಲಿ ಎನ್‌ಐಎ ಈ ಪ್ರಕರಣದ ತನಿಖೆಯನ್ನು ತನ್ನ ಕೈಗೆತ್ತಿಕೊಂಡಿತ್ತು.