ನವದೆಹಲಿ : ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಡಿಸೆಂಬರ್ 5 ರಂದು ನಡೆಸಲುದ್ದೇಶಿಸಿರುವ ಉಪಚುನಾವಣೆ ವಿಜಯೋತ್ಸವದ ‘ಸ್ವಾಭಿಮಾನಿ ಸಮಾವೇಶ’ವನ್ನು ಕಾಂಗ್ರೆಸ್ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟ ಸಂಯುಕ್ತಾಶ್ರಯದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಇದಕ್ಕೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಒಪ್ಪಿಗೆ ಸೂಚಿಸಿದ್ದಾರೆ.
ಹಿಂದುಳಿದ ವರ್ಗಗಳ ಒಕ್ಕೂಟದ ಹೆಸರಲ್ಲಿ ಸ್ವಾಭಿಮಾನಿ ಸಮಾವೇಶ ನಡೆಸಲು ತಯಾರಿ ನಡೆಸಿದ್ದಕ್ಕೆ ಪಕ್ಷದ ಒಂದು ವರ್ಗ ಆಕ್ಷೇಪ ವ್ಯಕ್ತಪಡಿಸಿತ್ತು. ಈ ವಿಚಾರ ಹೈಕಮಾಂಡ್ರೆಗೂ ಮುಟ್ಟಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಕ್ಷ ಹಾಗೂ ಒಕ್ಕೂಟದಿಂದ ಜಂಟಿಯಾಗಿ ಸಮಾವೇಶ ನಡೆಸುವುದಾಗಿ ತಿಳಿಸಿದ್ದು, ಇದಕ್ಕೆ ವರಿಷ್ಠರು ಒಪ್ಪಿಗೆ ನೀಡಿದ್ದಾರೆ.
ಇದೇ ವೇಳೆ ಸಮಾವೇಶಕ್ಕೆ ರಾಹುಲ್ ಗಾಂಧಿ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಮುಖ್ಯಮಂತ್ರಿ ಅವರು ಆಹ್ವಾನ ನೀಡಿದ್ದು, ಸುರ್ಜೇ ವಾಲಾ ಆಗಮಿಸಲು ಒಪ್ಪಿಕೊಂಡಿದ್ದಾರೆ