ಬೆಂಗಳೂರು : ಸಾಕಷ್ಟು ಅಂತೆ ಕಂತೆಗಳಿಗೆ ಎಡೆಮಾಡಿ ಕೊಟ್ಟಿದ್ದ ಹಾಸನ ಸಮಾವೇಶ ಕುರಿತ ಗೊಂದಲಕ್ಕೆ ತೆರೆಬಿದ್ದಿದ್ದು ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ನನ್ನ ನೇತೃತ್ವದಲ್ಲಿಯೇ ಕಾಂಗ್ರೆಸ್ ವಹಿಸಿಕೊಳ್ಳಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
ಡಿ.5ರಂದು ಹಾಸನದಲ್ಲಿ ನಡೆಯಲಿರವ ಸಮಾವೇಶದ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ನಡೆದ ಪೂರ್ವಭಾವಿ ಸಭೆಯ ನಂತರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನಾನು ಹಾಗೂ ಸಿಎಂ ಅವರು ದಿಲ್ಲಿ ಪ್ರವಾಸದಲ್ಲಿದ್ದಾಗ ದೇಶದಲ್ಲಾಗುತ್ತಿರುವ ವಿದ್ಯಮಾನ ಹಾಗೂ ಸಂವಿಧಾನ ರಕ್ಷಣೆಗೆ ಕಾರ್ಯಕ್ರಮ ರೂಪಿಸಲು ನಾಯಕರು ಮಾರ್ಗದರ್ಶನ ನೀಡಿದ್ದಾರೆ ಈ ಹಿನ್ನೆಲೆಯಲ್ಲಿ ಹಾಸನದಲ್ಲಿ ಸಮಾವೇಶ ಮಾಡುತ್ತಿದ್ದೇವೆ ಎಂದರು. ಈ ಮೂಲಕ ಸಿದ್ದರಾಮಯ್ಯ ಅವರಿಗೆ ಪರೋಕ್ಷ ವಾಗಿ ಟಾಂಗ್ ನೀಡಿದ್ದಾರೆ.
ಪಕ್ಷದ ಅನೇಕ ನಾಯಕರು, ಮುಖಂಡರು ಹಾಸನದಲ್ಲಿ ಸಮಾವೇಶ ಮಾಡಲು ತಿಳಿಸಿದ್ದಾರೆ. ನಮ್ಮ ಪಕ್ಷದ ವತಿಯಿಂದ ಸಚಿವರುಗಳು, ಜಿಲ್ಲಾ ಮಂತ್ರಿಗಳು ಸಮಾವೇಶದ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಸದ್ಯದಲ್ಲೇ ‘ನಾನು ಹಾಗೂ ಕೆಪಿಸಿಸಿ ತಂಡ ಸಮಾವೇಶ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ತಯಾರಿ ಪರಿಶೀಲಿಸಿ ಅಗತ್ಯ ಮಾರ್ಗದರ್ಶನ ನೀಡುತ್ತೇನೆ ಎಂದರು.