ಕುಂದಾಪುರ : ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಉಡುಪಿ ವಲಯ ಹಾಗೂ ವಿದ್ಯಾ ಸಮುದ್ರತೀರ್ಥ ಪ್ರೌಢಶಾಲೆ, ಕಿದಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 17ರ ವಯೋಮಾನದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಎಕ್ಸಲೆಂಟ್ ಹೈಸ್ಕೂಲ್ ಸುಣ್ಣಾರಿಯ 9ನೇ ತರಗತಿಯ ವಿದ್ಯಾರ್ಥಿನಿ ತನುಶ್ರೀ ಉದ್ದ ಜಿಗಿತ, ಗುಂಡು ಎಸೆತ ಹಾಗೂ 100 ಮೀ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸುವುದರೊಂದಿಗೆ ವೈಯಕ್ತಿಕ ಚಾಂಪಿಯನ್‍ಶಿಪ್ ಪಟ್ಟ ಅಲಂಕರಿಸಿರುತ್ತಾಳೆ. ಆ ಮೂಲಕ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾಳೆ. ನಮ್ಮ ಸಂಸ್ಥೆಯ ಹೆಮ್ಮೆಯ ವಿದ್ಯಾರ್ಥಿನಿಯಾದ ಇವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಬೋಧಕ -ಬೋಧಕೇತರ ವೃಂದದವರು ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.