ಕುಂದಾಪುರ : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಮತ್ತು ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ರಕ್ಷಕ-ಶಿಕ್ಷಕ ಸಭೆಯನ್ನು ಆಯೋಜಿಸಲಾಯಿತು. ಶೈಕ್ಷಣಿಕ, ಸಾಂಸ್ಕೃತಿಕ, ಸಾಹಿತ್ಯಿಕ, ಕ್ರೀಡೆ ಮತ್ತು ಇನ್ನಿತರ ವಿಸ್ತರಣಾ ಚಟುವಟಿಕೆಗಳಲ್ಲಿ ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡುತ್ತಿರುವುದು ಉಲ್ಲೇಖನೀಯ. ಇದರಲ್ಲಿ ತಮ್ಮೆಲ್ಲರ ಸಹಕಾರ ಮಹತ್ವದ್ದು, ಕಾಲೇಜಿನ ಶೈಕ್ಷಣಿಕ ವಾತಾವರಣದಲ್ಲಿ ವಿದ್ಯಾರ್ಥಿಗಳು ಶಿಸ್ತುಬದ್ಧವಾಗಿ ಬೆಳೆಯುವುದರ ಜೊತೆU,ೆ ಮನೆಯಲ್ಲಿ ಹೆತ್ತವರ-ಪೋಷಕರ ಮಾರ್ಗದರ್ಶನದಲ್ಲಿ ಸಂಸ್ಕಾರಯುತವಾಗಿ ಬದುಕನ್ನು ರೂಪಿಸಿಕೊಳ್ಳಬೇಕಾಗಿರುವುದು ವರ್ತಮಾನದ ತುರ್ತು ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ರಕ್ಷಕ-ಶಿಕ್ಷಕ ಸಭೆಯನ್ನುದ್ಧೇಶಿಸಿ ಮಾತನಾಡಿದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ ಪ್ರಾಸ್ತಾವಿಸಿದರು. ಡೀನ್ ಡಿಸಿಪ್ಲಿನ್ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ಸಂಸ್ಥೆಯ ಶಿಸ್ತು ಹಾಗೂ ಶೈಕ್ಷಣಿಕ ಬದ್ಧತೆಗಳ ಚಿತ್ರಣ ನೀಡಿದರು. ಪ್ಲೇಸ್‌ಮೆಂಟ್ ಆಫೀಸರ್ ಶ್ರೀ ಸುರೇಶ್ ಕಾಮತ್ ವಂದಿಸಿ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಸುಹಾಸ್ ಜೆಟ್ಟಿಮನೆ ನಿರೂಪಿಸಿದರು.